ಹೈದರಾಬಾದಿನ ಐತಿಹಾಸಿಕ ಮೆಕ್ಕಾ ಮಸೀದಿಯಲ್ಲಿ ಶುಕ್ರವಾರದಂದು ಪ್ರಾರ್ಥನೆಯ ಸಂದರ್ಭದಲ್ಲಿ ಸಂಭವಿಸಿದ ಪ್ರಬಲ ಬಾಂಬ್ ಸ್ಪೋಟ ಹಾಗೂ ಆ ಬಳಿಕ ಪೋಲಿಸರ ಗುಂಡಿನ ದಾಳಿಯಿಂದದ ತತ್ತರಿಸಿದ ನಗರ ಇದೀಗ ಸಹಜ ಸ್ಥಿತಿಗೆ ಮರಳಿದೆ.
ಬಾಂಬ್ ಸ್ಪೋಟದ ನಂತರ ಪೋಲಿಸರು ಉದ್ರಿಕ್ತ ಜನರನ್ನು ಚೆದುರಿಸಲು ಪೊಲೀಸ್ ಪಡೆ ನಡೆಸಿದ ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಮುಖ್ಯಮಂತ್ರಿ ವೈ.ಎಸ್. ರಾಜಶೇಖರ್ ರೆಡ್ಡಿ ಸಾರ್ವಜರಲ್ಲಿ ಕ್ಷಮೆಯಾಚಿಸಿದ್ದಾರೆ. ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಥವಾ ಪೋಲಿಸರು ನಡೆಸಿದ ಗುಂಡಿನ ಚಕಮಕಿಯ ಕುರಿತು ಸಿಬಿಐ ತನಿಖೆ ನಡೆಸಲು ಸರಕಾರಕ್ಕೆ ಯಾವುದೇ ಅಡ್ಡಿಯಿಲ್ಲ ಎಂದವರು ತಿಳಿಸಿದ್ದಾರೆ.
ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನ ಮಂತ್ರಿ ನಿಧಿಯಿಂದ ತಲಾ ಒಂದು ಲಕ್ಷ ರೂ.ಗಳು ಹಾಗೂ ಗಾಯಗೊಂಡವರಿಗೆ ತಲಾ 50,000 ರೂ.ಗಳ ಹೆಚ್ಚಿನ ನೆರವು ನೀಡುವುದಾಗಿ ಘೋಷಿಸಲಾಗಿದೆ.
ಕೇಂದ್ರ ಗೃಹ ಖಾತೆ ಸಚಿವ ಶಿವರಾಜ್ ಪಾಟೀಲ್ ಶನಿವಾರ ಈ ಘಟನೆ ಸ್ಥಳಕ್ಕೆ ಶನಿವಾರ ಭೇಟಿ ನೀಡಿ, ಆಸ್ಪತ್ರೆಯಲ್ಲಿ ದಾಖಲಾಗಿದ್ದ ಗಾಯಗೊಂಡವರ ಆರೋಗ್ಯ ವಿಚಾರಿಸಿದ್ದರು. ಇವರ ಸಂಗಡ ಮುಖ್ಯಮಂತ್ರಿಗಳು ಧಾವಿಸಿದ್ದರು.
|