ರಸ್ತೆಯಲ್ಲಿದ್ದ ಪ್ರಾಣಿಯೊಂದನ್ನು ರಕ್ಷಿಸುವ ಪ್ರಯತ್ನದಲ್ಲಿ ಚಾಲಕನ ನಿಯಂತ್ರಣ ಮೀರಿದ ಖಾಸಗಿ ಬಸ್ಸೊಂದು ಮಗುಚಿದ ಕಾರಣ ಬಸ್ಸಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, 14 ಮಂದ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಈ ಘಟನೆಯ ಲಕ್ನೊದ ಮೌರಾನಿಪುರ ಪರಿಸರದಲ್ಲಿ ಸಂಭವಿಸಿದೆ. ಬಸ್ ಚಾಲಕನ ರಸ್ತೆಯಲ್ಲಿ ನಡೆಯುತ್ತಿದ್ದ ಪ್ರಾಣಿಯನ್ನು ರಕ್ಷಿಸಲು ಹೋಗಿ ಬಸ್ಸಿನ ಮೇಲಿನ ನಿಯಂತ್ರಣವನ್ನು ಕಳೆದು ಕೊಂಡ ಕಾರಣ ಅಫಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಘಟನೆ ಸಂಭವಿಸಿದ ಸ್ಥಳದಲ್ಲೇ ಇಬ್ಬರು ಮರಣಹೊಂದಿದರೆ, ಒಬ್ಬರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವ ವೇಳೆ ನಿಧನ ಹೊಂದಿದರು ಎಂದು ಪೋಲೀಸರು ತಿಳಿಸಿದ್ದಾರೆ.
ಗಾಯಗೊಂಡವರನ್ನು ಝಾನ್ಸಿ ವೈದ್ಯಕೀಯ ಕಾಲೇಜಿನಲ್ಲಿ ದಾಖಲಿಸಿದ್ದು, ಅವರ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
|