ಜಮ್ಮು ಕಾಶ್ಮಿರದಲ್ಲಿ ಸ್ಥಿತಿ ಶಾಂತಿಯತವಾಗಿದ್ದು,ಸಹಜ ಸ್ಥಿತಿಯತ್ತ ಮರಳುತ್ತಿದೆ ಎಂದು ಕೇಂದ್ರ ಗೃಹ ಸಚಿವ ಶಿವರಾಜ ಪಾಟೀಲ್ ತಿಳಿಸಿದ್ದಾರೆ.
ರಾಜ್ಯದಲ್ಲಿರುವ ಅನೇಕ ರಾಜಕೀಯ ಪಕ್ಷಗಳು ಸೇನೆಯನ್ನು ಹಿಂತೆಗೆದುಕೊಳ್ಳುವಂತೆ ಕೇಂದ್ರಕ್ಕೆ ಮನವಿಯನ್ನು ಸಲ್ಲಿಸಿದ ಹಿನ್ನೆಲೆಯಲ್ಲಿ ಅದನ್ನು ಪರಿಶೀಲಿಸಲಾಗುವುದು ಎಂದು ಹೇಳಿದ್ದಾರೆ.
ಸೇನೆಯ ಉನ್ನತ ಅಧಿಕಾರಿಗಳು, ಪ್ಯಾರಾ ಮಿಲಿಟರಿ ತಂಡಮತ್ತು ಪೊಲೀಸ್ ಅಧಿಕಾರಿಗಳೊಂದಿಗೆ ಜಮ್ಮು ಕಾಶ್ಮಿರದಲ್ಲಿನ ಭದ್ರತಾ ವ್ಯವಸ್ಥೆಯ ಪುನರ್ ಪರಿಶೀಲನೆ ನಡೆಸಿ ರಾಜ್ಯದಲ್ಲಿ ಶಾಂತಿ ಸ್ಥಾಪನೆಗೆ ಕೇಂದ್ರ ಎಲ್ಲ ಸಹಕಾರ ನೀಡಲಿದೆ ಎಂದು ಹೇಳಿದರು.
ಜಮ್ಮು ಕಾಶ್ಮಿರದಲ್ಲಿ ಪರಿಸ್ಥಿತಿ ಉತ್ತಮಗೊಳ್ಳುತ್ತಾ ಸಾಗಿರುವುದು ನಮಗೆ ತೃಪ್ತಿ ತಂದಿದೆ. ರಾಜ್ಯದಲ್ಲಿರುವ ರಾಜಕೀಯ ಪಕ್ಷಗಳು ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರೊಂದಿಗೆ ಮಾತುಕತೆ ನಡೆಸಿದ್ದು ಈ ಕುರಿತು ಸಧ್ಯದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ಶಾಂತಿಸಹಜ ಸ್ಥಿತಿ ನೆಲೆಗೊಳ್ಳಲು ಎಲ್ಲ ನೆರವನ್ನು ನೀಡಲಾಗುವುದು ಎಂದು ಹೇಳಿದರು. ಹಿಂಸಾಚಾರ, ಮಾನವ ಹಕ್ಕು ಉಲ್ಲಂಘನೆ ಮತ್ತಿತರ ವಿಷಯಗಳ ಕುರಿತಂತೆ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಅವರೊಂದಿಗೆ ಚರ್ಚಿಸಲಾಯಿತು ಎಂದು ಹೇಳಿದರು.
|