ಪ್ರಧಾನಮಂತ್ರಿ ಮನಮೋಹನ ಸಿಂಗ್ ಅವರು, ಪ್ರಾಸ್ಟೇಟ್ ಗ್ರಂಥಿಯ ಅಸಹಜ ಬೆಳವಣಿಗೆ ಹಿನ್ನೆಲೆಯಲ್ಲಿ ಅಖಿತ ಭಾರತ ವೈದ್ಯ ವಿಜ್ಞಾನ ಸಂಸ್ಥೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದು, ಅವರನ್ನು ಮಂಗಳವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು.
ಶಸ್ತ್ರಚಿಕಿತ್ಸೆಯ ಬಳಿಕ ಸಿಂಗ್ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಪ್ರಧಾನಮಂತ್ರಿಗಳ ವೈದ್ಯಕೀಯ ತಜ್ಞರ ಸಮಿತಿಯ ಅಧ್ಯಕ್ಷ ಪ್ರೊ.ಕೆ. ಶ್ರೀನಾಥ್ ರೆಡ್ಡಿ ತಿಳಿಸಿದರು. ಪ್ರೊ.ಎನ್.ಪಿ. ಗುಪ್ತಾ ನೇತೃತ್ವದಲ್ಲಿ ವೈದ್ಯ ತಂಡ ಶನಿವಾರ ಬೆಳಿಗ್ಗೆ ಶಸ್ತ್ರಚಿಕಿತ್ಸೆ ನಡೆಸಿತು.
75 ವರ್ಷ ಪ್ರಾಯದ ಸಿಂಗ್ ಅವರನ್ನು ಅದೇ ದಿನ ಬೆಳಿಗ್ಗೆ 6 ಗಂಟೆಗೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
|