ರಾಮ ಸೇತು ಯೋಜನೆಯು ಇದೀಗ ಅತಿ ದೊಡ್ಡ ಮಟ್ಟದ ರಾಜಕೀಯ ವಿವಾದದ ಕೇಂದ್ರ ಬಿಂದುವಾಗುತ್ತಿದ್ದು. ತಮಿಳುನಾಡು ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರು, ರಾಮನೊಬ್ಬ ಮಹಾ ಸುಳ್ಳುಗಾರ ಮತ್ತು ಕುಡುಕನಾಗಿದ್ದ ಎಂದು ವಾಲ್ಮೀಕಿ ರಾಮಾಯಣದಲ್ಲಿ ವಿವರಿಸಲಾಗಿದೆ ಎಂದು ಹೇಳಿದ್ದಾರೆ.
ವಿರೋಧ ಪಕ್ಷ ನಾಯಕ ಲಾಲ್ ಕೃಷ್ಣ ಅಡ್ವಾಣಿಯವರು ಸಾರ್ವಜನಿಕ ಜೀವನದಲ್ಲಿ ಇರುವವರು ಈ ರೀತಿಯ ಹೇಳಿಕೆಗಳನ್ನು ನೀಡಬಾರದು ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಕೆಲಸಕ್ಕೆ ಮುಂದಾಗಬಾರದು. ತಕ್ಷಣವೇ ಹೇಳಿಕೆ ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದ ಬೆನ್ನಿಗೆ ಕರುಣಾನಿಧಿ ಮತ್ತೆ ವಿವಾದಿತ ಹೇಳಿಕೆ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಡಿಎಂಕೆ ಅಧ್ಯಕ್ಷ ಕರುಣಾನಿಧಿ, ವಾಲ್ಮೀಕಿ ರಾಮಾಯಣದಲ್ಲಿ ಹೇಳಿದ್ದಕ್ಕಿಂತ ಹೆಚ್ಚಿನದನ್ನು ಹೇಳಿಲ್ಲ ಎಂದು ಸ್ಪಷ್ಟ ಪಡಿಸಿದ ಅವರು, ವಾಲ್ಮೀಕಿ ರಾಮಾಯಣವನ್ನು ಬೇಕಿದ್ದರೆ ಅಡ್ವಾಣಿ ಒಂದು ಸಲ ಓದಿ ನನ್ನೊಂದಿಗೆ ಚರ್ಚೆಗೆ ಸಿದ್ಧರಾಗಲಿ ಎಂದು ಸವಾಲು ಹಾಕಿದ್ದಾರೆ.
ನಾಸ್ತಿಕವಾದಿಯಾಗಿರುವ ಕರುಣಾನಿಧಿಯವರನ್ನು ನಾನು ಗೌರವಿಸುತ್ತೇನೆ. ಧಾರ್ಮಿಕ ವಿಷಯಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕ ಜೀವನದಲ್ಲಿ ಇರುವವರು ಎಚ್ಚರದಿಂದ ಇರಬೇಕು ಎಂದು ಅಡ್ವಾಣಿ ಹೇಳಿದ್ದರು.
|