ಅಮೇಥಿ ಲೋಕಸಭಾ ಕ್ಷೇತ್ರದ ಸಂಸತ್ ಸದಸ್ಯರಾದ ರಾಹುಲ್ ಗಾಂಧಿ ಅವರನ್ನು ನೂತನ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಕಾಂಗ್ರೆಸ್ ಹೈಕಮಾಂಡ್ ಆದೇಶ ಹೊರಡಿಸಿದೆ.
ಯುವ ಕಾಂಗ್ರೆಸ್ ಹಾಗೂ ಎನ್‌ಎಸ್‌ಯುಐಗಳ ಉಸ್ತುವಾರಿಯ ಹೊಣೆಯನ್ನು ರಾಹುಲ್ ಅವರಿಗೆ ಹೈಕಮಾಂಡ್ ನೀಡಿದೆ.
ರಾಹುಲ್ ಜೊತೆಯಲ್ಲಿ ನೂತನ ಪ್ರಧಾನ ಕಾರ್ಯದರ್ಶಿಗಳಾಗಿ ಮೋಹಸಿನ್ ಕಿದ್ವಾಯಿ ಮತ್ತು ಪ್ರಥ್ವಿರಾಜ್ ಚವ್ಹಾಣ ಹಾಗೂ ಸಂಸದರಾದ ಪ್ರೀಯಾ ದತ್ ,ಜೀತೆಂದ್ರ ಪ್ರಸಾದ್ ಅವರುಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಿಂದ ಹಳೆಯ ಮುಖಗಳಾದ ಪ್ರಣಭ ಮುಖರ್ಜಿ ಹಾಗೂ ಸೋನಿಯಾಗಾಂಧಿಯವರನ್ನುಕೈಬಿಡಲಾಗಿದೆ.
37 ವರ್ಷ ವಯಸ್ಸಿನ ರಾಹುಲ್ ಪಕ್ಷ ಜವಾಬ್ದಾರಿಯನ್ನು ಹೊರಿಸಿದಲ್ಲಿ ಹೊಣೆಗಾರಿಕೆಯನ್ನು ನಿರ್ವಹಿಸಲು ಸಿದ್ದ ಎಂದು ಹೇಳಿಕೆ ನೀಡಿದ್ದರು.
ರಾಹುಲ್ ಗಾಂಧಿ ಪ್ರಧಾನಿ ಸ್ಥಾನವನ್ನು ನಿರ್ವಹಿಸಲು ಯೋಗ್ಯತೆಯನ್ನು ಹೊಂದಿದ್ದಾರೆ ಎಂದು ಅನೇಕ ಕಾಂಗ್ರೆಸ್ ಮುಖಂಡರು ಪಕ್ಷದ ಹೈಕಮಾಂಡ್‌ನ್ನು ಒತ್ತಾಯಿಸಿದ್ದರು ಎನ್ನಲಾಗಿದೆ.
ಮಧ್ಯಂತರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ಬದಲಾವಣೆಗಳನ್ನು ಮಾಡಲಾಗುತ್ತಿದೆ ಎಂದು ವಿಶ್ಲೇಷಿಸಲಾಗಿದೆ.
ಉತ್ತರ ಪ್ರದೇಶದ ಚುನಾವಣೆಯಲ್ಲಿ ರಾಹುಲ್ ಗಾಂಧಿಯವರ ಕಾರ್ಯವೈಖರಿಯನ್ನು ಕಂಡು ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಗೇಹ್ಲೋಟ್ ರಾಹುಲ್ ಅವರಿಗೆ ಪಕ್ಷದಲ್ಲಿ ಉನ್ನತ ಹುದ್ದೆ ನೀಡುವಂತೆ ಪಕ್ಷದ ಹೈಕಮಾಂಡ್‌ನ್ನು ಆಗ್ರಹಿಸಿದ್ದರು.
|