ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಜನಾ ಕೃಷ್ಣಮೂರ್ತಿ ದೀರ್ಘಕಾಲದ ವ್ಯಾಧಿಯ ಬಳಿಕ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದರು. ಅವರಿಗೆ 79 ವರ್ಷ ವಯಸ್ಸಾಗಿದ್ದು, ಅವರಿಗೆ ಇಬ್ಬರು ಪುತ್ರರು ಮತ್ತು ಮೂವರು ಪುತ್ರಿಯರಿದ್ದಾರೆ.
ಮೂತ್ರಪಿಂಡ ವೈಫಲ್ಯದಿಂದ ನರಳುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಒಂದು ತಿಂಗಳ ಹಿಂದೆ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು. ಆದರೆ ಪುನಃ ಪ್ರಜ್ಞೆ ಮರಳದೇ ಬೆಳಿಗ್ಗೆ 10.15ಕ್ಕೆ ಕೊನೆಯುಸಿರೆಳೆದರು ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಬಿಜೆಪಿಯ ಸಂಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ಕೃಷ್ಣಮೂರ್ತಿ ದೇಹಕ್ಕೆ ಅಂತಿಮ ನಮನ ಸಲ್ಲಿಸಲು ಕಿಲ್ಪಾಕ್‌ನಲ್ಲಿರುವ ನಿವಾಸಕ್ಕೆ ತರಲಾಗಿದೆ.. ಪಕ್ಷದ ರಾಜ್ಯಘಟಕದ ಅಧ್ಯಕ್ಷ ಎಲ್, ಗಣೇಶನ್ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಅಗಲಿದ ನಾಯಕನಿಗೆ ಅಂತಿಮ ಗೌರವ ಸಲ್ಲಿಸಿದರು.
ಮಧುರೈನಲ್ಲಿ ವಕೀಲ ವೃತ್ತಿಯ ಕೃಷ್ಣಮೂರ್ತಿ 2001ರಲ್ಲಿ ಬಿಜೆಪಿ ಅಧ್ಯಕ್ಷರಾಗಿ ನೇಮಕವಾದರು ಮತ್ತು ಕಾಂಗ್ರೆಸ್ ಮುಖಂಡ ಕಾಮರಾಜ್ ಬಳಿಕ ರಾಷ್ಟ್ರೀಯ ಪಕ್ಷವನ್ನು ಮುನ್ನಡೆಸಿದ ಮೊದಲ ತಮಿಳಿಗರಾಗಿದ್ದರು.
|