ಭಾರತೀಯ ಜನತಾ ಪಕ್ಷ ಮತ್ತು ಜೆಡಿಎಸ್ ನಡುವೆ ಕಳೆದ ಇಪ್ಪತ್ತು ತಿಂಗಳುಗಳಿಂದ ಕರ್ನಾಟಕ ಅಭಿವೃದ್ದಿ ರಂಗ ಪ್ರಹಸನ ನಿರೀಕ್ಷೆಯಂತೆ ಇಂದು ಅಂತ್ಯಕಂಡಿತು. ಈ ಮೊದಲು ನಿರ್ಧರಿಸಿದಂತೆ ಭಾರತೀಯ ಜನತಾ ಪಕ್ಷ ಕುಮಾರಸ್ವಾಮಿ ಅವರಿಗೆ ನೀಡಿದ್ದ ಬೆಂಬಲವನ್ನು ಅಧಿಕೃತವಾಗಿ ವಾಪಸ್ ಪಡೆಯುವ ಮೂಲಕ ಅಂತಿಮ ಕ್ಷಣದಲ್ಲಿ ಆಗಬಹುದಾದ ರಾಜಕೀಯ ಬೆಳವಣಿಗೆಗಳು ನಡೆಯಲಿಲ್ಲ.
ಕಳೆದ ರಾತ್ರಿ ದೇವೆಗೌಡ ಮತ್ತು ರಾಜನಾಥ್ ಸಿಂಗ್ ನಡುವಿನ ಮಾತುಕತೆಗಳು ಮುರಿದುಬಿದ್ದ ಹಿನ್ನಲೆಯಲ್ಲಿ ಬಿಜೆಪಿಯ ಉಪಾಧ್ಯಕ್ಷ ಯಶವಂತ್ ಸಿನ್ಹಾ ಅವರು ಬೆಂಬಲ ಹಿಂತೆಗೆದುಕೊಳ್ಳುವ ಪಕ್ಷದ ನಿರ್ಧಾರವನ್ನು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು. ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಮುರಿದು ಬಿದ್ದ ಹಿನ್ನಲೆಯಲ್ಲಿ ಕರ್ನಾಟಕದಲ್ಲಿನ ವಿಧಾನಸಭೆಯಲ್ಲಿ ವಿರೋಧ ಪಕ್ಷ ಸ್ಥಾನದಲ್ಲಿರುವ ಕಾಂಗ್ರೆಸ್; ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡುವ ಕುರಿತು ಮೌನ ತಾಳಿದ್ದು, ಕಾಂಗ್ರೆಸ್ ವಕ್ತಾರ ಅಭಿಷೇಕ್ ಸಿಂಗ್ವಿ ಅವರು ಕರ್ನಾಟಕದ ರಾಜಕೀಯ ಬೆಳವಣಿಗೆಗಳು ದುರದೃಷ್ಟಕರ ಮತ್ತು ವಿಷಾದನೀಯ ಎಂದು ಬಣ್ಣಿಸಿ, ಅಭಿವೃದ್ದಿ ರಂಗದ ಬೃಷ್ಟಾಚಾರದಿಂದ ಕರ್ನಾಟಕದ ಜನತೆ ರೋಸಿ ಹೋಗಿದ್ದರು.
ಅಕ್ಟೋಬರ್ 18ರಂದು ಕರೆಯಲಾಗಿರುವ ವಿಧಾನ ಸಭೆ ಅಧಿವೇಶನವನ್ನು ಅವರು ಪ್ರಸ್ತಾಪಿಸದೇ, ಕಾಂಗ್ರೆಸ್ ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ದವಾಗಿದ್ದು, ಸೂಕ್ತ ಸಮಯದಲ್ಲಿ ತನ್ನ ನಿಲುವು ಪ್ರಕಟಿಸಲಿದೆ ಎಂದು ಸಿಂಘ್ವಿ ಹೇಳಿದ್ದಾರೆ.
|