ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸುವ ಕುರಿತಾಗಿ ಕೇಂದ್ರ ಸಂಪುಟವು ಇಂದು ಸಂಜೆ ನಿರ್ಧಾರ ತೆಗೆದುಕೊಳ್ಳಲಿದೆ.
ಬಿಜೆಪಿ ಬೆಂಬಲ ಹಿಂತೆಗೆದುಕೊಂಡ ನಂತರ ಕುಮಾರಸ್ವಾಮಿ ಸರಕಾರವು ಅಲ್ಪಮತಕ್ಕಿಳಿದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯಪಾಲ ರಾಮೇಶ್ವರ ಠಾಕೂರ್ ಅವರು ಸೋಮವಾರ ರಾತ್ರಿ ವಿಧಾನಸಭೆ ವಿಸರ್ಜನೆಗೆ ಶಿಫಾರಸು ಮಾಡಿದ್ದರು.
ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನಿನ್ನೆ ರಾತ್ರಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ನೀಡಿದ ಬಳಿಕ ಕಾಂಗ್ರೆಸ್ ಉನ್ನತ ಸಮಿತಿಯು ಸಭೆ ಸೇರಿ, ಪರಿಸ್ಥಿತಿಯನ್ನು ಪರಾಮರ್ಶಿಸಿತು.
ಪ್ರಧಾನಿ ಮನಮೋಹನ್ ಸಿಂಗ್ ನಿವಾಸದಲ್ಲಿ ನಡೆದ ಈ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಹಿರಿಯ ಸಚಿವರಾದ ಪ್ರಣಬ್ ಮುಖರ್ಜಿ, ಅರ್ಜುನ್ ಸಿಂಗ್, ಎ.ಕೆ.ಆಂಟನಿ ಮತ್ತು ಎಚ್.ಆರ್.ಭಾರದ್ವಾಜ್ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಎಂ.ಕೆ.ನಾರಾಯಣನ್ ಮತ್ತು ಗೃಹಕಾರ್ಯದರ್ಶಿ ಮಧುಕರ್ ಗುಪ್ತಾ ಭಾಗವಹಿಸಿದ್ದರು.
|