ಮುಂಬರುವ ಚುನಾವಣೆಗೆ ಪಕ್ಷವನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ, ಕರ್ನಾಟಕ ಕಾಂಗ್ರೆಸ್‌ನಲ್ಲಿ ಭಾರಿ ಬದಲಾವಣೆಗಳನ್ನು ಮಾಡಲು ಪಕ್ಷದ ಹೈಕಮಾಂಡ್ ಚಿಂತನೆ ನಡೆಸುತ್ತಿದೆ.
ಕರ್ನಾಟಕದಲ್ಲಿ ಪಕ್ಷವು ಎದುರಿಸುತ್ತಿರುವ ಸವಾಲುಗಳನ್ನು ಪರಿಗಣಿಸಿ, ಸಂಪೂರ್ಣ ಬದಲಾವಣೆ ನಡೆಯುವ ಸಾಧ್ಯತೆಗಳಿವೆ ಎಂದು ಹಿರಿಯ ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.
ಅಧಿಕಾರ ಹಸ್ತಾಂತರ ವಿವಾದದಲ್ಲಿ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರಕಾರ ಪತನಗೊಂಡ ಹಿನ್ನೆಲೆಯಲ್ಲಿ, ಕರ್ನಾಟಕದ ವಿಧಾನಸಭೆ ಅಮಾನತಿನಲ್ಲಿದ್ದು, ಪ್ರಸ್ತುತ ರಾಷ್ಟ್ರಪತಿ ಆಡಳಿತ ಜಾರಿಯಲ್ಲಿದೆ.
ಇತ್ತೀಚೆಗೆ ನಡೆದ ಪಂಚಾಯತ್ ಚುನಾವಣೆಗಳಲ್ಲಿ ಕಾಂಗ್ರೆಸ್ ಉತ್ತಮ ಪ್ರದರ್ಶನ ತೋರಿರಲಿಲ್ಲ. ಜೆಡಿಎಸ್ ಮತ್ತು ಬಿಜೆಪಿಗಳು ಮತ್ತೊಮ್ಮೆ ಒಂದಾಗುವ ಮೂಲಕ ಪಕ್ಷವನ್ನು ಮತ್ತೊಮ್ಮೆ ಅಚ್ಚರಿಯಲ್ಲಿ ಕೆಡವಲಿದೆ ಎಂದು ಕೇಂದ್ರೀಯ ನಾಯಕತ್ವ ಚಿಂತಿಸುತ್ತಿದೆ.
ಆದರೆ, ಇನ್ನೊಂದು ಸರಕಾರ ರಚಿಸುವ ಸಾಧ್ಯತೆಯ ವಿರುದ್ಧ ಮತ್ತು ಮಧ್ಯಂತರ ಚುನಾವಣೆಗೆ ಸಿದ್ಧರಾಗುವ ಕುರಿತು ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ ಸಮಾವೇಶದಲ್ಲಿ ಜೆಡಿಎಸ್ ಕೈಗೊಂಡ ನಿರ್ಧಾರವು ಕಾಂಗ್ರೆಸ್‌ಗೆ ಹೆಚ್ಚು ಬಲವನ್ನು ನೀಡಿದೆ.
|