ಇಂಡೋ- ಯುಎಸ್ ಪರಮಾಣು ಒಪ್ಪಂದದ ಹೊಂದಾಣಿಕೆಗಾಗಿ ಈಗಲೂ ಪ್ರಯತ್ನ ನಡೆಸಲಾಗುತ್ತಿದೆ ಎಂದು ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ.
45 ರಾಷ್ಟ್ರಗಳ ಪರಮಾಣು ಪೂರೈಕಾ ಗುಂಪುಗಳ ಸದಸ್ಯ ರಾಷ್ಟ್ರಗಳಾದ ಬ್ರೆಝಿಲ್ ಮತ್ತು ದಕ್ಷಿಣ ಆಫ್ರಿಕಾದ ನಾಯಕರೊಂದಿಗೆ ಸ್ನೇಹಕೂಟದಲ್ಲಿ ಭಾಗವಹಿಸುತ್ತಿದ್ದ ಸಂದರ್ಭದಲ್ಲಿ ಹೇಳಿದರು.
ಪರಮಾಣು ಒಪ್ಪಂದವನ್ನು ಮುಂದುವರಿಸುವ ಸಲುವಾಗಿ ಎನ್‌ಎಸ್‌ಜಿ ತನ್ನ ನಿಯಮಗಳನ್ನು ಬದಲಾಯಿಸಬೇಕಾಗುತ್ತದೆ ಎಂದು ಅವರು ಹೇಳಿದರು.
ಸಭೆಯ ನಂತರ ಜೋಹನ್ಸ್‌ಬರ್ಗ್‌ನಲ್ಲಿ ಮಾತನಾಡಿದ ದಕ್ಷಿಣ ಆಫ್ರಿಕಾ ಅಧ್ಯಕ್ಷ, ಎನ್ಎಸ್‌ಜಿಯು ಈ ವಿಚಾರದ ಕುರಿತಾಗಿ ಮಾತುಕತೆ ನಡೆಸುತ್ತಿದೆ ಎಂದು ತಿಳಿಸಿದರು.
|