ಗೋದ್ರಾ ಹತ್ಯಾಕಾಂಡದ ನಂತರ ಗುಜರಾತ್‌ನಲ್ಲಿ ನಡೆದ ಸಾಮೂಹಿಕ ಕೊಲೆಗಳಿಗೆ ಕಾರಣಿಭೂತರಾದ ಮುಖ್ಯಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕ ಎಲ್‌ಕೆ ಅಡ್ವಾಣಿ ಅವರನ್ನು ಬಂಧಿಸಬೇಕೆಂದು ಕೇಂದ್ರ ರೈಲ್ವೆ ಸಚಿವ ಹಾಗೂ ಆರ್‌ಜೆಡಿ ಅಧ್ಯಕ್ಷ ಲಾಲೂ ಪ್ರಸಾದ್ ಯಾದವ್ ಆಗ್ರಹಿಸಿದ್ದಾರೆ.
ಗುಜರಾತಿನಲ್ಲಿ ನಡೆದ ಸಾಮೂಹಿಕ ಹತ್ಯಾಕಾಂಡದಲ್ಲಿ ಮುಖ್ಯಮಂತ್ರಿ ನರೇಂದ್ರ ಮೋದಿ ಭಾಗಿಯಾಗಿರುವುದು ತೆಹಲ್ಕಾ ಗುಪ್ತ ಕಾರ್ಯಾಚರಣೆಯಿಂದ ಮಾನವ ವಿರೋಧಿ ಕೃತ್ಯ ಎನ್ನುವುದು ಸಾಬೀತಾಗಿದೆ ಎಂದು ಹೇಳಿದ್ದಾರೆ.
ಬಿಜೆಪಿ ನಾಯಕ ಅಡ್ವಾಣಿ ಅವರ ಕೃಪಾಶಿರ್ವಾದದಲ್ಲಿ ನರೇಂದ್ರ ಮೋದಿ ಅವಕಾಶವಾದಿ ರಾಜಕಾರಣವನ್ನು ನಡೆಸುತ್ತಿದ್ದು,ಆದರೆ ಸಾಮೂಹಿಕ ಹತ್ಯೆಗಳಾದ ಗುಜರಾತ್ ಘಟನೆಯಿಂದ ತಪ್ಪಿಸಿಕೊಳ್ಳಲಾಗದು ಎಂದು ಕಿಡಿಕಾರಿದ್ದಾರೆ.
ಕೂಡಲೇ ಮುಖ್ಯಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕ ಎಲ್‌ಕೆ ಅಡ್ವಾಣಿ ಅವರ ವಿರುದ್ದ ಪ್ರಕರಣವನ್ನು ದಾಖಲಿಸಿಕೊಂಡು ಜೈಲಿಗೆ ಕಳುಹಿಸಬೇಕೆಂದು ಆಗ್ರಹಿಸಿದ್ದಾರೆ.
ತೆಹಲ್ಕಾ ವಾರಪತ್ರಿಕೆ ನಡೆಸಿದ ಗುಪ್ತ ಕಾರ್ಯಾಚರಣೆಯಲ್ಲಿ ಭಾಗಿಯಾದ ಮೋದಿ ಹಾಗೂ ಅಡ್ವಾಣಿ ಪ್ರಜಾಪ್ರಭುತ್ವದಲ್ಲಿ ಕಪ್ಪು ಚುಕ್ಕೆಯಾಗಿದ್ದಾರೆ. ಗುಜರಾತಿನಲ್ಲಿ ನಡೆದ ಸಾಮೂಹಿಕ ಹತ್ಯೆಗಳು ಕೋಪೊದ್ರಿಕ್ತ ಜನರಿಂದ ಆಗಿದ್ದಲ್ಲಾ.ಇದೊಂದು ಪೂರ್ವ ಯೋಜಿತ ಸಂಚು ಎನ್ನುವುದು ತೆಹಲ್ಕಾ ಕಾರ್ಯಾಚರಣೆಯಿಂದ ಬಹಿರಂಗವಾಗಿದೆ ಎಂದು ಟೀಕಿಸಿದ್ದಾರೆ.
ಮೋದಿ ಹಾಗೂ ಅಡ್ವಾಣಿ ಅವರನ್ನು ಬಂಧಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದಾರೆ.
|