ರಾಜ್ಯದಲ್ಲಿ ಜೆಡಿಎಸ್ ಬೆಂಬಲಿತ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕೇಂದ್ರದಲ್ಲಿರುವ ಕಾಂಗ್ರೆಸ್ ಸರಕಾರ ಹೀನಾಯ ವರ್ತನೆಗಳನ್ನು ತೋರುತ್ತಿದೆ ಎಂದು ಬಿಜೆಪಿ ಹಿರಿಯ ನಾಯಕ ವೆಂಕಯ್ಯನಾಯ್ಡು ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ರಾಜ್ಯಪಾಲರಾದ ರಾಮೇಶ್ವರ ಠಾಕೂರ್ ಕೇಂದ್ರವನ್ನು ಸಂಪರ್ಕಿಸಿದ್ದಾರೆ ಎನ್ನುವ ಕುರಿತು ಅನುಮಾನಗಳಿವೆ. ಇಲ್ಲವಾದಲ್ಲಿ ರಾಜ್ಯಪಾಲರು ಸರಕಾರ ರಚನೆಗೆ ಬಿಜೆಪಿಯನ್ನು ಅಹ್ವಾನಿಸುವಲ್ಲಿ ವಿಳಂಬವೇಕೆ ಎನ್ನುವ ಶಂಕೆ ವ್ಯಕ್ತವಾಗುತ್ತದೆ ಎಂದು ಹೇಳಿದ್ದಾರೆ.
ನಗರದಲ್ಲಿರುವ ಬಿಜೆಪಿ ಮುಖ್ಯ ಕಚೇರಿ ಕಮಲಾಯಯಂನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಕರ್ನಾಟಕ ರಾಜ್ಯಪಾಲರಾದ ರಾಮೇಶ್ವರ ಠಾಕೂರ್ ಅವರು ಜೆಡಿಎಸ್ ಮೈತ್ರಿಯಿಂದಾಗಿ ಬಹುಮತದ ಬೆಂಬಲವನ್ನು ಹೊಂದಿದ ಬಿಜೆಪಿಯನ್ನು ಸರಕಾರ ರಚಿಸಲು ಕೂಡಲೇ ಅಹ್ವಾನಿಸಬೇಕೆಂದು ನಾಯ್ಡು ಒತ್ತಾಯಿಸಿದರು.
ಕರ್ನಾಟಕದ ವಿಧಾನಸಭೆಯನ್ನು ವಿಸರ್ಜಿಸಿ ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡಲು ಕಾಂಗ್ರೆಸ್ ಸರಕಾರ ಇನ್ನಿಲ್ಲದ ಕಸರತ್ತು ನಡೆಸಿದೆ ಎಂದು ಆಪಾದಿಸಿದರು.
ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪಾ ಮೊಯಿಲಿ ಅವರು ರಾಜ್ಯಪಾಲರು ಸತ್ಯವರದಿಯನ್ನು ಕೇಂದ್ರಕ್ಕೆ ರವಾನಿಸಿದ್ದಾರೆ ಎನ್ನುವ ಹೇಳಿಕೆಯನ್ನು ಟೀಕಿಸಿದ ನಾಯ್ಡು ರಾಜ್ಯಪಾಲರ ವರದಿ ಬಹಿರಂಗವಾಗದೇ ವೀರಪ್ಪಾ ಮೊಯಿಲಿ ಅವರಿಗೆ ತಿಳಿದಿದ್ದಾದರೂ ಹೇಗೆ ಎಂದು ವ್ಯಂಗವಾಡಿದರು.
|