ಯುಪಿಎ ಸರ್ಕಾರದ ಮಹತ್ವದ ಕಾರ್ಯಕ್ರಮ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನಯನ್ನು ಅನುಷ್ಠಾನಕ್ಕೆ ತರುವಾಗ ಕಾಂಗ್ರೆಸೇತರ ಸರ್ಕಾರಗಳಲ್ಲಿ ಕೇಳಿಬಂದಿರುವ ಭ್ರಷ್ಟಾಚಾರದ ದೂರುಗಳು ಮತ್ತು ಹಣಕಾಸಿನ ಅಕ್ರಮಗಳ ದೂರುಗಳ ಬಗ್ಗೆ ಎಚ್ಚರಿಕೆಯಿಂದ ಪರಿಶೀಲಿಸುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮನಮೋಹನ ಸಿಂಗ್ ಸರ್ಕಾರಕ್ಕೆ ಆದೇಶಿಸಿದ್ದಾರೆ.
ಹಣದ ದುರ್ಬಳಕೆ ಮತ್ತು ಭ್ರಷ್ಟಾಚಾರದ ದೂರುಗಳು ವ್ಯಾಪಕವಾಗಿ ಕೇಳಿಬಂದಿವೆ. ಅವುಗಳನ್ನು ಎಚ್ಚರಿಕೆಯಿಂದ ಪರಿಶೀಲನೆ ಮಾಡುವಂತೆ ಯುಪಿಎ ಸರ್ಕಾರಕ್ಕೆ ನಾನು ಸೂಚಿಸಿದ್ದೇನೆ ಎಂದು ಅವರು ಕಾಂಗ್ರೆಸ್ ಕಾರ್ಯಕರ್ತರಿಗೆ ಬರೆದಿರುವ ಪತ್ರದಲ್ಲಿ ಅವರು ಹೇಳಿದ್ದಾರೆ.
ಈ ಪತ್ರವು ಪಕ್ಷದ ಮುಖವಾಣಿ ಸಂದೇಶ್‌ನ ಇತ್ತೀಚಿನ ಸಂಚಿಕೆಯಲ್ಲಿ ಪ್ರಕಟವಾಗಿದೆ. ಕಾಂಗ್ರೆಸ್ ಪ್ರಾಯೋಜಿತ ಯೋಜನೆಯನ್ನು ಅನುಷ್ಠಾನಕ್ಕೆ ತರಲು ಅತ್ಯಂತ ಆಸಕ್ತಿಯಿಂದ ಕಾರ್ಯನಿರ್ವಹಿಸುವಂತೆ ಅವರು ಕಾರ್ಯಕರ್ತರಿಗೆ ಕರೆ ನೀಡಿದರು.
ಗೋಧಿ ಮತ್ತು ಬತ್ತಕ್ಕೆ ಕನಿಷ್ಠ ಬೆಂಬಲ ಬೆಲೆ ನಿಗದಿಗೊಳಿಸಿದ್ದನ್ನು ಪ್ರಸ್ತಾಪಿಸಿ, ಅಂತಹ ಮಟ್ಟದ ಹೆಚ್ಚಳ ಅಭೂತಪೂರ್ವವಾಗಿದ್ದು, ರೈತ ಸಮುದಾಯಕ್ಕೆ ನಮ್ಮ ದೃಢ ಬದ್ಧತೆಗೆ ನಿದರ್ಶನವಾಗಿದೆ ಎಂದು ಅವರು ಹೇಳಿದರು.
|