ಹನ್ನೊಂದನೆ ಪಂಚ ವಾರ್ಷಿಕ ಯೋಜನೆಯಲ್ಲಿ ನಗರಗಳ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ಸುಮಾರು 2,89,615 ಕೋಟಿ ರೂಪಾಯಿ ನೀಡುವಂತೆ ನಗರಾಭಿವೃದ್ಧಿ ಸಚಿವಾಲಯ ಕೇಳಿಕೊಂಡಿದೆ.
ಹನ್ನೊಂದನೆಯ ಪಂಚವಾರ್ಷಿಕ ಯೋಜನೆಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಒಟ್ಟು 2,89,615 ಕೋಟಿ ರೂಪಾಯಿ ನೀಡುವಂತೆ ನಾವು ಕೇಳಿಕೊಂಡಿದ್ದೇವೆ. ಈಗಾಗಲೇ ನಮ್ಮ ಪ್ರಸ್ತಾವನೆಗೆ ಯೋಜನಾ ಆಯೋಗ ಒಪ್ಪಿಗೆ ಸೂಚಿಸಿದ್ದು, ಅಂತಿಮ ಹಣಕಾಸು ಒಪ್ಪಿಗೆಗಾಗಿ ರಾಷ್ಟ್ರೀಯ ಅಭಿವೃದ್ಧಿ ಸಮಿತಿಗೆ ಕಳುಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿ ಎಂ ರಾಮಚಂದ್ರನ್ ಅವರು ಹೇಳಿದ್ದಾರೆ.
ಇಲ್ಲಿಯವರೆಗಿನ ಎಲ್ಲ ಪಂಚವಾರ್ಷಿಕ ಯೋಜನಗೆಳ ನಗರಾಭಿವೃದ್ಧಿಯನ್ನು ಕಡೆಗಣಿಸಿವೆ. ಆದರೆ, ಈ ಬಾರಿ ನಗರಾಭಿವೃದ್ಧಿಗಳಲ್ಲಿನ ಸಾರಿಗೆ ಸಂಪರ್ಕ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಸುಮಾರು 1,32,590 ಕೋಟಿ ರೂಪಾಯಿ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
ಸಾರಿಗೆ ಸಂಪರ್ಕ ಸುಧಾರಣೆಯಲ್ಲದೆ, ನಗರ ಪ್ರದೇಶಗಳಲ್ಲಿನ ಜನಸಂಖ್ಯೆ, ನೀರು ಪೂರೈಕೆ, ಚರಂಡಿ ವ್ಯವಸ್ಥೆಯ ಸುಧಾರಣೆಗೆ ಈ ಹನ್ನೊಂದನೆಯ ಪಂಚವಾರ್ಷಿಕ ಯೋಜನೆಯಲ್ಲಿ ಕೇಂದ್ರೀಕರಿಸಲಾಗಿದೆ ಎಂದು ಅವರು ಹೇಳಿದರು.
|