ಡಿಸೆಂಬರ್ 11ರಂದು ಗುಜರಾತಿನಲ್ಲಿ ನಡೆಯಲಿರುವ ಮೊದಲನೇ ಹಂತದ ಚುನಾವಣೆ ಅಂಗವಾಗಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಶುಕ್ರವಾರ ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ರಾಜ್‌ಕೋಟ್ ಮತ್ತು ಸೂರತ್‌ನಲ್ಲಿ ಸಿಂಗ್ ಅವರು ಎರಡು ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದು,ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೌರಾಷ್ಟ್ರ, ಕೇಂದ್ರ ಗುಜರಾತ್ ಮತ್ತು ಸೌತ್ ಗುಜರಾತಿಗೆ ಪ್ರವಾಸ ಕೈಗೊಳ್ಳಲಿದ್ದಾರೆ.
ಅಲ್ಲದೆ ಚುನಾವಣೆಯಲ್ಲಿ ಎನ್‌ಸಿಪಿಯ ವರಿಷ್ಠ ಶರದ್ ಪವಾರ್ ಅವರು ಕೂಡಾ ಮುಂದಿನ ಕೆಲವು ದಿನಗಳ ಕಾಲ ರಾಜ್ಯದಲ್ಲಿ ಪಕ್ಷದ ಕುರಿತು ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ.
ಸೊಹ್ರಾಬುದ್ದೀನ್ ನಕಲಿ ಎನ್‌ಕೌಂಟರ್ ಕುರಿತು ಸಮರ್ಥಿಸಿಕೊಂಡ ಮೋದಿಯವರ ಚುನಾವಣಾ ಭಾಷಣವು ಇದೀಗ ವಿವಾದದ ಕೇಂದ್ರಬಿಂದುವಾಗಿದ್ದು, ಈ ಕುರಿತು ಚುನಾವಣಾ ಆಯೋಗ ನೋಟೀಸ್ ನೀಡಿದೆ. ಈ ವಿವಾದದ ಕುರಿತಾಗಿ ಮನಮೋಹನ್ ಸಿಂಗ್ ಅವರು ಇಂದಿನ ಸಾರ್ವಜನಿಕ ಸಭೆಯಲ್ಲಿ ಮೋದಿ ನಿಲುವಿನ ಕುರಿತು ಪಕ್ಷದ ನಿಲುವನ್ನು ಸ್ಪಷ್ಟಪಡಿಸಲಿದ್ದಾರೆ.
ಶನಿವಾರ ಸಂಸತ್ತಿನ ಚಳಿಗಾಲದ ಅಧಿವೇಶನವು ಪೂರ್ಣಗೊಂಡ ನಂತರ, ಪ್ರಧಾನಿಯವರು ಗುಜರಾತಿನಲ್ಲಿ ಎರಡನೇ ಸುತ್ತಿನ ಪ್ರಚಾರವನ್ನು ಕೈಗೊಳ್ಳಲಿದ್ದಾರೆ.
|