ದೆಹಲಿಯತ್ತ ತೆರಳುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಗುರುವಾರ ನಸುಕು ಹರಿಯುವ ಮೊದಲು ಬಾಂಬ್ ಸ್ಫೋಟಿಸಿದ ಪರಿಣಾಮವಾಗಿ ಕನಿಷ್ಠ ಐದು ಮಂದಿ ಸಾವಿಗೀಡಾಗಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ.
ಅಸ್ಸಾಂನ ಗೋಲಘಾಟ್ ಜಿಲ್ಲೆಯಲ್ಲಿ ಶಂಕಿತ ಉಗ್ರರಿಂದ ದಿಬ್ರೂಗಢ-ದೆಹಲಿ ರಾಜಧಾನಿ ರೈಲಿನ ಸರಕು ಸಾಗಾಟದ ಬೋಗಿಯಲ್ಲಿ ಮಧ್ಯರಾತ್ತಿ 2 ಗಂಟೆ ಸುಮಾರಿಗೆ ಈ ಕೃತ್ಯ ನಡೆದಿದ್ದು, ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಲಗೇಜ್ ಬೋಗಿಯು ಸಂಪೂರ್ಣವಾಗಿ ಹಾನಿಗೀಡಾಗಿದ್ದು, ರೈಲ್ವೇ ಹಳಿಗೂ ಹಾನಿಯಾಗಿದೆ. ಘಟನೆಯ ಹಿನ್ನೆಲೆಯಲ್ಲಿ ಈಶಾನ್ಯ ಭಾಗದ ರೈಲುಗಳಿಗೆ ಹೆಚ್ಚಿನ ಭದ್ರತಾ ವ್ಯವಸ್ಥೆ ಏರ್ಪಡಿಸಲಾಗಿದೆ.
ಬೆಳಗ್ಗೆ 6 ಗಂಟೆ ಸುಮಾರಿಗೆ ರೈಲು ಸ್ಥಳದಿಂದ ಪುನಃ ಹೊರಟಿದ್ದು, ರೈಲ್ವೇ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಮತ್ತು ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಕ್ರಮ ಕೈಗೊಂಡಿದ್ದಾರೆ.
|