ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ನಿಚ್ಚಳ ಗೆಲುವು ಸಾಧಿಸಿದ ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ಮುಖ್ಯಮಂತ್ರಿಯಾಗಿ ಮಂಗಳವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
57 ವರ್ಷ ವಯಸ್ಸಿನ ಮೋದಿ ಅವರು ಇಲ್ಲಿನ ಸರ್ದಾರ್ ಪಟೇಲ್ ಸ್ಟೇಡಿಯಂನಲ್ಲಿ ಮಧ್ಯಾಹ್ನ 12.50ಕ್ಕೆ ರಾಜ್ಯಪಾಲ ನವಲ್ ಕಿಶೋರ್ ಶರ್ಮಾ ಅವರಿಂದ ಪ್ರತಿಜ್ಞಾ ವಿಧಿ ಸ್ವೀಕರಿಸಲಿದ್ದಾರೆಂದು ಬಿಜೆಪಿ ಹೇಳಿಕೆ ತಿಳಿಸಿದೆ.ಅಟಲ್ ಬಿಹಾರಿ ವಾಜಪೇಯಿ ಅವರ ಹುಟ್ಟುಹಬ್ಬದ ದಿನದಂದೇ ಹೊಂದಿಕೆಯಾಗುವಂತೆ ಪ್ರಮಾಣ ವಚನ ಸಮಾರಂಭ ನಡೆಯಲಿದೆ.
ಇದಕ್ಕೆ ಮುಂಚೆ ಡಿ.27ರಂದು ಮೋದಿ ಪ್ರತಿಜ್ಞಾ ವಿಧಿ ಸ್ವೀಕರಿಸಲು ನಿರ್ಧರಿಸಲಾಗಿತ್ತು. ಔಪಚಾರಿಕವಾಗಿ ಮೋದಿ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲು ನೂತನವಾಗಿ ಆರಿಸಿಬಂದ ಶಾಸಕರು ದಿನದ ಕೊನೆಯಲ್ಲಿ ಭೇಟಿಯಾಗಲಿದ್ದಾರೆ.ಮೋದಿ ಸೇರಿದಂತೆ ಎಲ್ಲ 117 ಬಿಜೆಪಿ ಶಾಸಕರು ಇಲ್ಲಿನ ಟೌನ್ ಹಾಲ್‌ನಲ್ಲಿ ಭೇಟಿ ಮಾಡಲಿದ್ದಾರೆ.
|