ಆಸ್ತಮಾ ಸಮಸ್ಯೆ ತಲೆದೋರಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಸೋಮವಾರ ರಾತ್ರಿ ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋನಿಯಾ ಅವರ ಸ್ಥಿತಿ ಸ್ಥಿರವಾಗಿದೆ ಎಂಬುದಾಗಿ ಮೂಲಗಳು ತಿಳಿಸಿವೆ. ಕೆಮ್ಮು ಮತ್ತು ಉಸಿರಾಟದ ತೊಂದರೆ ಕಂಡು ಬಂದ ಕಾರಣ ಅವರನ್ನು ಸೋಮವಾರ ತಡರಾತ್ರಿ ಆಸ್ಪತ್ರೆಗೆ ಸೇರಿಸಲಾಗಿದೆ. ಅಲ್ಲಿ ಚಿಕಿತ್ಸೆ ನೀಡಲಾಗಿದ್ದು ಅವರ ಆರೋಗ್ಯ ಸ್ಥಿತಿ ಸುಧಾರಿಸಿದೆ ಎಂದು ಮೂಲಗಳು ತಿಳಿಸಿವೆ.
ಸೋನಿಯಾರ ಮಕ್ಕಳಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಪ್ರವಾಸದಲ್ಲಿದ್ದು ಅವರು ಇಂದು ಅಥವಾ ನಾಳೆ ಮರಳಲಿದ್ದಾರೆ ಎಂದು ಅವರ 10, ಜನಪಥ್ ನಿವಾಸದ ಮೂಲಗಳು ತಿಳಿಸಿವೆ.
|