ಮಧ್ಯಂತರ ಚುನಾವಣೆಯ ಸಾಧ್ಯತೆಯನ್ನು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ರಾಮ್ ವಿಲಾಸ್ ಪಾಸ್ವಾನ್ ಗುರುವಾರ ತಳ್ಳಿಹಾಕಿದ್ದಾರೆ. ಮಧ್ಯಂತರ ಚುನಾವಣೆ ಸಾಧ್ಯತೆಯಿಲ್ಲ. ನಾವು ಮುಂದಿನ ಬಜೆಟ್‌ಗೆ ಸಿದ್ಧತೆ ನಡೆಸುತ್ತಿದ್ದೇವೆ ಎಂದು ಅವರು ವರದಿಗಾರರಿಗೆ ತಿಳಿಸಿದರು.
ಬಿಜೆಪಿ ಕೂಡ ಮಧ್ಯಂತರ ಚುನಾವಣೆಗೆ ಸಿದ್ಧವಿಲ್ಲ ಎಂದು ಹೇಳಿದ ಅವರು, ರಾಜಸ್ತಾನ ಮತ್ತು ಮಧ್ಯಪ್ರದೇಶದಲ್ಲಿ ಈ ವರ್ಷಾಂತ್ಯದಲ್ಲಿ ಆರಂಭವಾಗುವ ವಿಧಾನಸಭೆ ಚುನಾವಣೆಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುವುದು ಎಂದು ನುಡಿದರು. ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸೋಲು ಕಳವಳಕಾರಿ ವಿಷಯವಾಗಿದ್ದು, ಜಾತ್ಯತೀತ ಶಕ್ತಿಗಳು ಒಂದುಗೂಡುವುದು ಸೂಕ್ತ ಎಂದು ನುಡಿದರು.
ಅಭಿವೃದ್ಧಿ ವಿಷಯಗಳ ಕಡೆ ಗಮನವಹಿಸಲು ಸಾಮಾಜಿಕ ಮತ್ತು ಜಾತ್ಯತೀತ ಶಕ್ತಿಗಳು ಒಂದಾಗಬೇಕು ಎಂದು ಹೇಳಿದ ಅವರು, ಅಲ್ಪಸಂಖ್ಯಾತರ ಏಳಿಗೆಗೆ ಸಂಬಂಧಿಸಿದ ಸಾಚಾರ್ ಸಮಿತಿ ಶಿಫಾರಸುಗಳನ್ನು ಅನುಷ್ಠಾನಕ್ಕೆ ತರುವ ಬಗ್ಗೆ ಅವರು ಒಲವು ವ್ಯಕ್ತಪಡಿಸಿದರು.
|