ಗುರ್‌ಗಾಂವ್‌ನಲ್ಲಿ 8 ತರಗತಿಯ ವಿದ್ಯಾರ್ಥಿಗೆ ಗುಂಡು ಹಾರಿಸಿ ಕೊಂದ ದಾರುಣ ಘಟನೆ ಜನರ ಮನದಲ್ಲಿ ಇನ್ನೂ ಹಸಿರಾಗಿರುವಾಗಲೇ ಮಧ್ಯಪ್ರದೇಶದ ಸಾತ್ನಾದಲ್ಲಿ ಇಂತಹದ್ದೇ ಆಘಾತಕಾರಿ ಘಟನೆ ಗುರುವಾರ ಸಂಭವಿಸಿದೆ. ಮಧ್ಯಪ್ರದೇಶದ ಸಾತ್ನಾ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ 8ನೇ ತರಗತಿಯ ವಿದ್ಯಾರ್ಥಿಯೊಬ್ಬನು ಅದೇ ಶಾಲೆಯ ಹಿರಿಯ ವಿದ್ಯಾರ್ಥಿ ಹಾರಿಸಿದ ಗುಂಡಿಗೆ ಬಲಿಯಾಗಿದ್ದಾನೆ.
ಚೋರ್ಬಾನಿ ಗ್ರಾಮದ ಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿ 8 ತರಗತಿಯ ಕಿರಿಯ ವಿದ್ಯಾರ್ಥಿಯನ್ನು ನಾಡ ರಿವಾಲ್ವರ್‌ನಿಂದ ಗುಂಡು ಹಾರಿಸಿ ಕೊಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಮೃತಪಟ್ಟನೆಂದು ತಿಳಿದುಬಂದಿದೆ.
ಸಾತ್ನಾ ಜಿಲ್ಲೆಗೆ 40 ಕಿಮೀ ದೂರದ ಚೊರಾಬಾರಿ ಪ್ರೌಢಶಾಲೆಯಲ್ಲಿ ಶಾಲೆಯ ಪರೀಕ್ಷೆ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಆರೋಪಿ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾರ್ಥಿಗಳಿಬ್ಬರ ನಡುವೆ ಜಗಳಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದು, ಈ ಸಂಬಂಧ ಕೇಸ್ ದಾಖಲಿಸಿಕೊಂಡಿದ್ದಾರೆ.
|