ವಿಶ್ವವಿದ್ಯಾಲಯಗಳಲ್ಲಿ ನಿಷೇಧಿಸಲಾಗಿರುವ ವಿಧ್ಯಾರ್ಥಿ ಪದಾಧಿಕಾರಿಗಳ ಚುನಾವಣೆಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ನಡೆಯುತ್ತಿರುವ ನಿರಶನ ಪ್ರತಿಭಟನೆಯನ್ನು ಮುಂದುವರೆಸಲು ಸಮಾಜವಾದಿ ಪಕ್ಷ ನಿರ್ಧರಿಸಿದೆ.
ವಿಧ್ಯಾರ್ಥಿಗಳ ಪ್ರತಿಭಟನೆಯಿಂದಾಗಿ ರೈಲು ಮತ್ತು ಬಸ್ ಸಂಚಾರಗಳಲ್ಲಿ ಅಸ್ತವ್ಯಸ್ತವಾಗಿದ್ದು ಜನಸಂಚಾರಕ್ಕೆ ತೊಂದರೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ಸಾವಿರಾರು ಸಂಖ್ಯೆಯಲ್ಲಿ ಸೇರಿದ ಪ್ರತಿಭಟನಾಕಾರರು ಪೊಲೀಸರ ವಿರುದ್ದ ಅಕ್ರೋಶವನ್ನು ವ್ಯಕ್ತಪಡಿಸಿ ಕಲ್ಲು ತೂರಾಟದಲ್ಲಿ ತೊಡಗಿದಾಗ ಉದ್ರಿಕ್ತ ಸ್ಥಿತಿ ಉಂಟಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ರಾಜ್ಯದಲ್ಲಿರುವ ವಿಶ್ವವಿದ್ಯಾಲಯಗಳಲ್ಲಿ ವಿಧ್ಯಾರ್ಥಿ ಸಂಘಟನೆಗಳ ಚುನಾವಣೆ ನಿಷೇಧವನ್ನು ಹಿಂತೆಗೆದುಕೊಳ್ಳಬೇಕು ಎಂದು ಶಿಕ್ಷಣ ಸಚಿವರಿಗೆ ಪ್ರತಿಭಟನಾಕಾರರು ಘೇರಾವ ಹಾಕಿ ಒತ್ತಾಯಿಸಿದರು. ವಿದ್ಯಾರ್ಥಿ ಸಂಘಟನೆಗಳ ಚುನಾವಣೆಯಲ್ಲಿ ಅಪರಾಧಿಗಳು ಪ್ರಮುಖ ಪಾತ್ರವಹಿಸುತ್ತಿದ್ದಾರೆ ಎಂದು ಮಾಜಿ ಚುನಾವಣಾ ಆಯುಕ್ತ ಜೆ.ಎಂ.ಲಿಂಗ್ಡೊ 2006ರಲ್ಲಿ ವರದಿಯನ್ನು ಸಿದ್ದಪಡಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸರಕಾರ ಚುನಾವಣೆಗಳನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು.
ಪೊಲೀಸ್ ಗೋಲಿಬಾರ್‌ನಲ್ಲಿ ಬಿಟೆಕ್ ಎರಡನೇ ವರ್ಷದ ವಿಧ್ಯಾರ್ಥಿಯಾಗಿದ್ದ ಮುಕೇಶ್ ಯಾದವ್ ಮೃತನಾಗಿದ್ದು,ಸೌರಭ ಮತ್ತು ಅವಿನಾಶ್ ಪೊಲೀಸರ ಗುಂಡಿನಿಂದ ಗಾಯಗೊಂಡಿದ್ದಾರೆ.
ಸೈಫೈನಲ್ಲಿ ಪೊಲೀಸರ ಗೋಲಿಬಾರ್ ನಡೆದ ನಂತರ ಮಾತನಾಡಿದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಸೈಫೈನಲ್ಲಿ ಸಮಾಜವಾದಿ ಪಕ್ಷದ ಕಾರ್ಯಕರ್ತರು ಹಾಗೂ ವಿಧ್ಯಾರ್ಥಿಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಪೊಲೀಸರು ಗೋಲಿಬಾರ್ ಮಾಡಿದ್ದರಿಂದ ಹಿಂಸಾಚಾರದ ಘಟನೆಗಳು ಉಲ್ಬಣಿಸಿವೆ ಎಂದು ಆರೋಪಿಸಿದರು.
ಸೈಫೈನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ತಾವು ಪಾಲ್ಗೊಂಡು ವಿಧ್ಯಾರ್ಥಿ ಸಂಘಟನೆಗಳ ಚುನಾವಣೆ ನಿಷೇಧವನ್ನು ಹಿಂತೆಗೆದುಕೊಳ್ಳುವಂತೆ ಸರಕಾರವನ್ನು ಒತ್ತಾಯಿಸಲಾಗುವುದು ಎಂದು ಮುಲಾಯಂ ಹೇಳಿದರು.
|