ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಎಂಬ ವಿಚಾರದ ಕುರಿತು ಶೀಘ್ರವೇ ನಿರ್ಧರಿಸಲಾಗುವುದು ಎಂದು ಪ್ರಧಾನಿ ಮನಮೋಹನ್ ಸಿಂಗ್ ಅವರು ತಿಳಿಸಿದ್ದಾರೆ.
ಭಾರತೀಯ ಜನತಾ ಪಕ್ಷದ ಹಿರಿಯ ಮುತ್ಸದ್ಧಿ ಅಟಲ್ ಬಿಹಾರಿ ವಾಜಪೇಯಿಯವರ ಹೆಸರನ್ನು ಭಾರತ ರತ್ನ ಪ್ರಶಸ್ತಿಗೆ ಹೆಸರನ್ನು ಪರಿಗಣಿಸಬೇಕೆಂದು ಕೋರಿ ಬಿಜೆಪಿಯ ನಾಯಕ ಎಲ್.ಕೆ.ಆಡ್ವಾಣಿ ಜನವರಿ 5ರಂದು ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಪತ್ರ ಬರೆದಿದ್ದರು.
ಆ ನಿಟ್ಟಿನಲ್ಲಿ ಹಲವಾರು ಮಂದಿ ಪದ್ಮಶ್ರೀ ಹಾಗೂ ಪದ್ಮ ಭೂಷಣ ಪ್ರಶಸ್ತಿಗಾಗಿ ಮನವಿ ಸಲ್ಲಿಸುತ್ತಾರೆ, ಆದರೆ ಅದಕ್ಕೆ ಕೇಂದ್ರದ ನಿರ್ದಿಷ್ಟವಾದ ಸಮಿತಿ ಇದ್ದು ಆ ಸಮಿತಿಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಭಾರತ ರತ್ನ ಪ್ರಶಸ್ತಿಯನ್ನು ಪ್ರತಿವರ್ಷ ಪ್ರಜಾಪ್ರಭುತ್ವ ದಿನದಂದು ಘೋಷಿಸಲಾಗುತ್ತದೆ. ಕಳೆದ ಬಾರಿ ಶೆಹನಾಯ್ ಮಾಂತ್ರಿಕ ಉಸ್ತಾದ್ ಬಿಸ್ಮಿಲ್ಲಾ ಖಾನ್ ಹಾಗೂ 2001ರಲ್ಲಿ ಗಾನಕೋಗಿಲೆ ಲತಾಮಂಗೇಶ್ಕರ್ ಅವರಿಗೆ ನೀಡಲಾಗಿತ್ತು.
|