ನಾಸಿಕ್‌ನಲ್ಲಿ ಭಾನುವಾರ ರಾತ್ರಿ ನಡೆದ ಭೀಕರ ಬಸ್ ಅಪಘಾತವೊಂದರಲ್ಲಿ 36 ಮಂದಿ ಸಾವನ್ನಪ್ಪಿದ್ದು, 30 ಮಂದಿ ಗಾಯಗೊಂಡಿದ್ದಾರೆ.
ಖಾಸಗಿ ಕಂಪನಿಯೊಂದಕ್ಕೆ ಸೇರಿದ ಈ ಬಸ್, ನಾಸಿಕ್‌ನ ಸಪ್ತಗಿರಿ ತೀರ್ಥಕ್ಷೇತ್ರದಿಂದ ಹಿಂತಿರುಗಿ ಬರುತ್ತಿದ್ದ ವೇಳೆ ಕಣಿವೊಂದಕ್ಕೆ ಉರುಳಿ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಮುಂಬಯಿ ಮತ್ತು ಅದರ ಆಸುಪಾಸಿನವರೆಂದು ತಿಳಿದು ಬಂದಿದ್ದು, ಅಪಘಾತದಲ್ಲಿ ಗಾಯಗೊಂಡವರನ್ನು ನಾಸಿಕ್‌ನ ವಾಣಿ ರೂರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
|