ವಿಧಾನ ಸಭಾ ಮತ್ತು ಲೋಕಸಭಾ ಕ್ಷೇತ್ರಗಳ ಪುನಾರಚನೆ ಆಯೋಗ ನೀಡಿರುವ ವರದಿಯ ಜಾರಿಗೆ ಸಂಬಂಧಿಸಿದಂತೆ ಶ್ರೇಷ್ಟ ನ್ಯಾಯಾಲಯದಲ್ಲಿ ಸಲ್ಲಿಸಿರುವ ಮನವಿಗೆ ಉತ್ತರಿಸಲು ಕೇಂದ್ರ ಸರಕಾರಕ್ಕೆ ಎರಡು ವಾರಗಳ ಅವಧಿಯನ್ನು ಸುಪ್ರೀಂ ಕೋರ್ಟ್ ನೀಡಿದೆ.
ಮುಖ್ಯ ನ್ಯಾಯಾಧೀಶ ಕೆ.ಜಿ ಬಾಲಕೃಷ್ಣನ್ ಅವರನ್ನು ಒಳಗೊಂಡ ವಿಭಾಗೀಯ ಪೀಠವು ಹೆಚ್ಚುವರಿ ಸಾಲಿಸಿಟರ್ ಜನರಲ್ ಗೋಪಾಲ್ ಸುಬ್ರಮಣಿಯಂ ಅವರು ಮಾಡಿಕೊಂಡ ಮನವಿಯನ್ನು ಸ್ವೀಕರಿಸಿ ಉತ್ತರಿಸಲು ಕೇಂದ್ರಕ್ಕೆ ಎರಡು ವಾರಗಳ ಅವಧಿ ನೀಡಿತು. ಜನವರಿ ಏಳರಂದು ಸರ್ವೋಚ್ಚ ನ್ಯಾಯಾಲವು ಕೇಂದ್ರಕ್ಕೆ ಮನವಿಗೆ ಉತ್ತರಿಸಲು ನಾಲ್ಕು ವಾರಗಳ ಅವಧಿಯನ್ನು ನೀಡಿತ್ತು.
ಕ್ಷೇತ್ರ ಪುನರಾಚನೆಯ ಅದಿಸೂಚನೆಗೆ ಒಪ್ಪಿಗೆ ಪಡೆಯಬೇಕು ಎಂದು ಕೇಂದ್ರಕ್ಕೆ ನಿರ್ದೇಶಿಸಬೇಕು ಎಂದು ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಲಾಗಿ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಾಧೀಶರನ್ನು ಒಳಗೊಂಡ ವಿಭಾಗೀಯ ಪೀಠ ಕೈಗೆತ್ತಿಕೊಂಡಿದೆ.
ದೆಹಲಿ ಸ್ಟಡಿ ಗ್ರುಪ್ ಸರಕಾರೇತರ ಸಂಘಟನೆಯೊಂದು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮನವಿ ಅರ್ಜಿಯನ್ನು ಡಿಸೆಂಬರ್ ಹತ್ತರಂದು ವಿಚಾರಣೆಗೆ ಕೈಗೆತ್ತಿಕೊಂಡ ಸರ್ವೋಚ್ಚ ನ್ಯಾಯಾಲಯ ಕೈಗೆತ್ತಿಕೊಂಡಿದೆ. ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಮನವಿ ಅರ್ಜಿಯಲ್ಲಿ ಕೆಲವು ರಾಜ್ಯಗಳಲ್ಲಿ ವಿಧಾನ ಸಭೆ ಚುನಾವಣೆಗಳು ಜರುಗಲಿದ್ದು, ಈ ಚುನಾವಣೆಗೆ ಮುನ್ನ ಕ್ಷೇತ್ರ ಪುನರ್ ವಿಂಗಡನಾ ಆಯೋಗ ಸಲ್ಲಿಸಿರುವ ಶಿಫಾರಸ್ಸುಗಳನ್ನು ಜಾರಿಗೆ ಅದರ ಪ್ರಕಾರ ಚುನಾವಣೆ ನಡೆಸಬೇಕು ಎಂದು ಕೇಂದ್ರಕ್ಕೆ ಆದೇಶಿಸಬೇಕು ಎಂದು ಕೇಳಿಕೊಂಡಿತ್ತು.
ಕ್ಷೇತ್ರ ಪುನರ್ ವಿಂಗಡನಾ ಆಯೋಗವು ಕಾಶ್ಮೀರ್, ಆಸ್ಸಾಮ್, ಅರುಣಾಚಲ ಪ್ರದೇಶ ಮಣಿಪುರ ಮತ್ತು ನಾಗಾಲ್ಯಾಂಡ್ ರಾಜ್ಯಗಳನ್ನು ಹೊರತು ಪಡಿಸಿ ಉಳಿದ ಎಲ್ಲ ರಾಜ್ಯಗಳಲ್ಲಿನ ವಿಧಾನ ಮತ್ತು ಲೋಕಸಭಾ ಚುನಾವಣೆ ಕ್ಷೇತ್ರಗಳ ಪುನರ್ ವಿಂಗಡನೆ ಮಾಡಿದೆ.
ಸರ್ವೋಚ್ಚ ನ್ಯಾಯಾಲಯಕ್ಕೆ ಈ ಕುರಿತು ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ದಶಕಗಳ ಹಿಂದೆ ನಿರ್ಧಾರವಾಗಿದ್ದ ಚುನಾವಣಾ ಕ್ಷೇತ್ರಗಳ ಪ್ರಕಾರ ಚುನಾವಣೆ ನಡೆಸಿದರೆ ಚುನಾವಣೆಯಲ್ಲಿ ಸಾರ್ವಜನಿಕ ಅಭಿಪ್ರಾಯ ಏನು ಅನ್ನುವುದು ತಿಳಿಯುವುದು ಕಷ್ಟವಾಗುತ್ತದೆ ಎಂದು ದೂರಲಾಗಿತ್ತು..
|