ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಮಂಡಿಸಿದ ಬಜೆಟ್ ಆಮ್ ಆದ್ಮಿ ,ಮಧ್ಯಮವರ್ಗ ಮತ್ತು ರೈತರ ಮಿತ್ರವಾಗಿದೆ. ಇದಕ್ಕಾಗಿ ನಾನು ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಅವರನ್ನು ಅಭಿನಂದಿಸುತ್ತೇನೆ ಎಂದು ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ.
ದೇಶದ ಗಾಮೀಣಭಾಗದ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯಗಳಿಗೆ ಅಧಿಕಾರ ನೀಡಲಾಗಿದ್ದು, ಕೇಂದ್ರ ಸರಕಾರ ರಾಜ್ಯಗಳಿಗೆ 65 ಸಾವಿರ ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ಶೇ 45ರಷ್ಟು ಅನುದಾನ ಬಿಹಾರ್ ಒರಿಸ್ಸಾ ಮತ್ತು ಮಧ್ಯಪ್ರದೇಶ ರಾಜ್ಯಗಳಿಗೆ ಅನ್ವಯವಾಗುತ್ತದೆ ಎಂದು ಪ್ರಧಾನಿ ತಿಳಿಸಿದ್ದಾರೆ.
ಭಾರತ ಹಲವು ರಾಜ್ಯಗಳಿರುವ ದೇಶ. ಆದ್ದರಿಂದ ರಾಜ್ಯಗಳಿಗೆ ಯೋಜನೆಯ ಅನುಷ್ಠಾನ ಅಧಿಕಾರ ನೀಡಿರುವುದಲ್ಲದೇ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
ಕಳೆದ ಮೂರು ವರ್ಷಗಳಲ್ಲಿ ಕೃಷಿ ಅಭಿವೃದ್ಧಿಯಲ್ಲಿ ಪ್ರಗತಿಯನ್ನು ಸಾಧಿಸಲಾಗಿದ್ದು ಇನ್ನು ಹೆಚ್ಚಿನ ಪ್ರಗತಿ ಸಾಧಿಸಬೇಕಾಗಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.
|