ಉಗ್ರರ ಅಡಗುತಾಣದ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ದಾಳಿ ನಡೆಸಿದಾಗ ಉಗ್ರರು ಪರಾರಿಯಾಗಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸೇನಾಪಡೆಗಳ ವಕ್ತಾರರು ತಿಳಿಸಿದ್ದಾರೆ.
ಜಮ್ಮುವಿನ ರಾಜೋರಿ ಜಿಲ್ಲೆಯ ಥಾನಾಮಂಡಿ ಪ್ರದೇಶದಲ್ಲಿ ದಾಳಿ ಮಾಡಿದ ಭದ್ರತಾಪಡೆಗಳು 104 ಸುತ್ತಿನ ಎಕೆ-47 ರೈಫಲ್ಗಳು,300 ರಿವಾಲ್ವರ್ಗಳು ಸೇರಿದಂತೆ ಇನ್ನಿತರ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆಗಳು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
ಭದ್ರತಾ ಪಡೆಗಳು ದಾಳಿ ನಡೆಸುವ ಮೊದಲೇ ಉಗ್ರರು ಪರಾರಿಯಾಗಿದ್ದು, ಉಗ್ರರ ಪತ್ತೆಗಾಗಿ ವ್ಯಾಪಕ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಸೇನಾಪಡೆಗಳ ವಕ್ತಾರರು ತಿಳಿಸಿದ್ದಾರೆ.
|