ವಿಶ್ವಸಂಸ್ಥೆಯ ಶಾಂತಿ ಸೇನೆಯಲ್ಲಿರುವ ದಕ್ಷಿಣ ಆಫ್ರಿಕಾದ ಕಾಂಗೋನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೂವರು ಭಾರತೀಯ ಸೇನಾಧಿಕಾರಿಗಳು ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಘಟನೆ ವರದಿಯಾಗಿದೆ.
ರಜೆಯ ನಿಮಿತ್ಯ ತೆರಳಿದ ಲೆಫ್ಟಿನೆಂಟ್ ಕರ್ನಲ್ ಸೇರಿದಂತೆ ಮೂವರು ಸೇನಾಧಿಕಾರಿಗಳು ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಾರೆಂದು ಆರೋಪದ ಕುರಿತಂತೆ ತನಿಖೆಗೆ ಆದೇಶಿಸಲಾಗಿದೆ ಎಂದು ರಕ್ಷಣಾ ಸಚಿವ ಎ.ಕೆ. ಆಂಟೋನಿ ತಿಳಿಸಿದ್ದಾರೆ.
ಕಾಂಗೋ ದೇಶದಲ್ಲಿ ವಿಶ್ವಸಂಸ್ಥೆಯ ಆದೇಶದ ಮೇರೆಗೆ ರವಾನಿಸಲಾಗಿದ್ದ ಭಾರತೀಯ ಸೇನಾಧಿಕಾರಿಗಳಲ್ಲಿ ಒಬ್ಬರು ಲೆಫ್ಟಿನೆಂಟ್ ಕರ್ನಲ್ ಹಾಗೂ ಇಬ್ಬರು ಮೇಜರ್ ಹುದ್ದೆಯಲ್ಲಿದ್ದಾರೆ ಎಂದು ಸೇನಾಮೂಲಗಳು ತಿಳಿಸಿವೆ.
|