ಅಮೆರಿಕಾ ಪ್ರವಾಸದಲ್ಲಿರುವ ವಿದೇಶಾಂಗ ಮಂತ್ರಿ ಪ್ರಣಬ್ ಮುಖರ್ಜಿ ಅಧ್ಯಕ್ಷ ಜಾರ್ಜ್ ಬುಷ್ ಅವರನ್ನು ವೈಟ್ ಹೌಸ್‌ನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.
ಉಭಯ ದೇಶಗಳ ಅಣು ಒಪ್ಪಂದ ಸೇರಿದಂತೆ ದ್ವಿಪಕ್ಷೀಯ ಸಂಬಂಧಗಳ ಕುರಿತು 35 ನಿಮಿಷಗಳ ಕಾಲ ಉಭಯ ನಾಯಕರು ಮಾತುಕತೆ ನಡೆಸಿದರು.
ಭಾರತ ಮತ್ತು ಅಮೆರಿಕ ದೇಶಗಳ ನಡುವಿನ ಅಣು ಒಪ್ಪಂದ ಹಾಗೂ ಇನ್ನಿತರ ಕ್ಷೇತ್ರಗಳ ಭಾಂದವ್ಯ ವೃದ್ಧಿ ಕುರಿತಂತೆ ಮಾತುಕತೆ ನಡೆಸಲಾಯಿತು ಎಂದು ಜಾರ್ಜ್ ಬುಷ್ ಹಾಗೂ ಮುಖರ್ಜಿ ತಿಳಿಸಿದ್ದಾರೆ.
ಉಭಯ ನಾಯಕರ ಮಾತುಕತೆಯ ಸಂದರ್ಭದಲ್ಲಿ ವಿದೇಶಾಂಗ ವ್ಯವಹಾರಗಳ ಕಾರ್ಯದರ್ಶಿ ಕಾಂಡೋಲೀಸಾ ರೈಸ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಸ್ಟೀಫನ್ ಹ್ಯಾಡ್ಲಿ ಉಪಸ್ಥಿತರಿದ್ದರು.
ಅಮೆರಿಕ -ಭಾರತ ನಾಗರಿಕ ಪರಮಾಣು ಒಪ್ಪಂದವನ್ನು ಅಂತಿಮಗೊಳಿಸುವ ಭರವಸೆಯನ್ನು ಮುಖರ್ಜಿ ಅವರು ಜಾರ್ಜ್ ಬುಷ್ ಹಾಗೂ ಅವರಿಗೆ ವಿದೇಶಾಂಗ ವ್ಯವಹಾರಗಳ ಕಾರ್ಯದರ್ಶಿ ಕಾಂಡೋಲೀಸಾ ರೈಸ್ ಅವರಿಗೆ ಭರವಸೆ ನೀಡಿದ್ದಾರೆ
|