ನಗರದ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾಗಿದ್ದ ಹೇಮಂತ್ ಪಾಂಡೆ ತಮ್ಮಲ್ಲಿದ್ದ ರಿವಾಲ್ವರ್‌ನಿಂದ ಗುಂಡುಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ನ್ಯಾಯಾಧೀಶ ಹೇಮಂತ್ ಪಾಂಡೆ ಇಂದು ಬೆಳಿಗ್ಗೆ ತಮ್ಮ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಸಿಂಗ್ ತಿಳಿಸಿದ್ದಾರೆ.
ನ್ಯಾಯಾಧೀಶ ಹೇಮಂತ್ ಪಾಂಡೆ ಅವರ ಆತ್ಮಹತ್ಯೆಯ ತನಿಖಾ ಸಂದರ್ಭದಲ್ಲಿ ಸೀಮಾ ಪಾಂಡೆ ಎನ್ನುವ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
|