ಆರನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಹಣಕಾಸು ಸಚಿವಾಲಯವು ಜಾರಿ ಸಮಿತಿಯನ್ನು ಸ್ಥಾಪಿಸಿದ್ದು. ಈ ಕುರಿತು ಸರಕಾರದ ಮಂಜೂರಾತಿಗೆ ಕಾಯುತ್ತಿದೆ.
ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಮ್ ಅವರು ಆರನೇ ವೇತನ ಆಯೋಗದ ಜಾರಿಗೆ ಸಂಬಂಧಿಸಿದಂತೆ ಸಮಿತಿಯನ್ನು ರಚಿಸಲು ನಿರ್ಧರಿಸಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ. ಜಂಟಿ ನಿರ್ದೇಶಕರ ನೇತೃತ್ವದಲ್ಲಿ ಆರು ಸದಸ್ಯರನ್ನು ಒಳಗೊಂಡ ಸಮಿತಿಯು ಅಸ್ತಿತ್ವಕ್ಕೆ ಬರಲಿದ್ದು. ಆರು ತಿಂಗಳಿನಲ್ಲಿ ತನ್ನ ಕಾರ್ಯವನ್ನು ಪೂರೈಸಲಿದೆ.
ಇದಕ್ಕೂ ಮುನ್ನ ಕೇಂದ್ರ ಸರಕಾರವು ಸಂಪುಟ ಕಾರ್ಯದರ್ಶಿಗಳ ನೇತೃತ್ವದಲ್ಲಿ ಆರನೇ ವೇತನ ಆಯೋಗದ ವರದಿಯನ್ನು ಜಾರಿಗೊಳಿಸುವ ಸಂಬಂಧ ಸಮಿತಿಯನ್ನು ರಚಿಸಿದೆ. ಸಂಪುಟ ಕಾರ್ಯದರ್ಶಿಗಳು ನೀಡಲಿರುವ ವರದಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದ ನಂತರ ಜಾರಿ ಸಮಿತಿಯು ತನ್ನ ಕಾರ್ಯಾರಂಭ ಮಾಡಲಿದೆ.
ಹಣದುಬ್ಬರದಲ್ಲಿ ದಾಖಲೆಯ ಏರಿಕೆಯಾಗುತ್ತಿರುವ ಕಾರಣ ಕೇಂದ್ರ ಸರಕಾರವು ಕೂಡ ಆದಷ್ಟು ಬೇಗ ಆರನೇ ವೇತನ ಆಯೋಗದ ವರದಿಯನ್ನು ಜಾರಿಗೊಳಿಸಲು ತೀರ್ಮಾನಿಸಿದೆ.
|