ಪಕ್ಷದೊಳಗೆ ಆಂತರಿಕ ಪ್ರಜಾಪ್ರಭುತ್ವ ಇಲ್ಲ ಎಂದು ಆರೋಪಿಸಿ ತನ್ನೆಲ್ಲ ಸಾಂಸ್ಥಿಕ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದ ಮಹಾರಾಷ್ಟ್ರ ಬಿಜೆಪಿ ಘಟಕದ ಕಾರ್ಯದರ್ಶಿ ಗೋಪಿನಾಥ್ ಮುಂಡೆ ತನ್ನ ರಾಜೀನಾಮೆಯನ್ನು ಹಿಂತೆಗೆದುಕೊಂಡಿದ್ದಾರೆ.
ಮಂಗಳವಾರ ದೆಹಲಿಯಲ್ಲಿ ಬಿಜೆಪಿ ವರಿಷ್ಟರಾದ ಎಲ್.ಕೆ. ಆಡ್ವಾಣಿ ಹಾಗೂ ಪಕ್ಷಾಧ್ಯಕ್ಷ ರಾಜ್‌ನಾಥ್ ಸಿಂಗ್ ಅವರನ್ನು ಭೇಟಿಮಾಡಿ ಮಾತುಕತೆ ನಡೆಸಿರುವ ಗೋಪಿನಾಥ್, ಭಾನುವಾರ ನೀಡಿದ ರಾಜೀನಾಮೆಯನ್ನು ಹಿಂತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.
"ಇದುವರೆಗೂ ನಾನು ಬಿಜೆಪಿಯೊಂದಿಗೆ ಇದ್ದೆ. ಇನ್ನು ಮುಂದೆಯೂ ಬಿಜೆಪಿಯಲ್ಲಿ ಮುಂದುವರಿಯುವುದಾಗಿ" ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ರಾಜ್‌ನಾಥ್ ಸಿಂಗ್ ಅವರ ಮನೆಯಲ್ಲಿ ಮಾತುಕತೆ ನಡೆಸಿ ಹೊರಬರುತ್ತಿದ್ದ ಗೋಪಿನಾಥ್ ಪತ್ರಕರ್ತರೊಂದಿಗೆ ಮಾತನಾಡಿದರು.
|