ಜಮ್ಮು: ಇಲ್ಲಿನ ಕತುವಾ ಜಿಲ್ಲೆಯಲ್ಲಿ ವಿಶೇಷ ಪೊಲೀಸ್ ಅಧಿಕಾರಿಯೊಬ್ಬರು ತನ್ನ ಸೇವಾ ರೈಫಲ್‌ನಿಂದ ಗುಂಡುಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ.
ಸುರೀಂದರ್ ಕುಮಾರ್ ಎಂಬವರು ಈ ಕೃತ್ಯ ಎಸಗಿರುವುದಾಗಿ ಅಧಿಕೃತ ಮೂಲಗಳು ಹೇಳಿವೆ.
ಜಿಲ್ಲೆಯ ಜಮ್ಮು ಪಟಾನ್‌ಕೋಟ್ ರೈಲ್ವೇ ಲೈನ್‌ನಲ್ಲಿ ಕಾವಲು ಕೆಲಸಕ್ಕೆ ಅವರು ನಿಯೋಜಿತರಾಗಿದ್ದರೆಂದು ಮೂಲಗಳು ತಿಳಿಸಿವೆ.
ಈ ಘಟನೆಯ ಕುರಿತು ತನಿಖೆಗೆ ಆದೇಶಿಸಲಾಗಿದೆ.
|