ಮುಂಬೈ: ಮುಂಬೈ-ಪುಣೆ ಎಕ್ಸ್‌ಪ್ರೆಸ್ ಹೈವೇಯಲ್ಲಿ ಕಳೆದ ರಾತ್ರಿ ಸಂಭವಿಸಿರುವ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಸೇರಿದಂತೆ ಸುಮಾರು 15 ಮಂದಿ ಸಾವಿಗೀಡಾಗಿದ್ದು, ಇತರ ಐದು ಮಂದಿ ಗಾಯಗೊಂಡಿದ್ದಾರೆ.
ಪನ್ವೇಲ್ ಸಮೀಪ ಟ್ರಕ್ ಮತ್ತು ಜೀಪು ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಈ ದುರಂತ ಸಂಭವಿಸಿದೆ.
ಸತಾರದಿಂದ ಮುಂಬೈಗೆ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ ಜೀಪು ಟ್ರಕ್ಕಿಗೆ ಡಿಕ್ಕಿ ಹೊಡೆಯಿತು.
ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
|