ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಪಂಚಾಯತ್ ಚುನಾವಣೆ: ನಂದಿಗ್ರಾಮ ಪ್ರಕ್ಷುಬ್ಧ
ಕೋಲ್ಕತಾ: ಪಶ್ಚಿಮಬಂಗಾಳದ ವಿವಾದಾಸ್ಪದ ನಂದಿಗ್ರಾಮದಲ್ಲಿ ಪಂಚಾಯತ್ ಚುನಾವಣೆಗೆ ಇನ್ನೂ ಮೂರು ದಿನಗಳು ಬಾಕಿ ಉಳಿದಿರುವಂತೆ ಪೂರ್ವಮಿಡ್ನಾಪುರದಲ್ಲಿ ಉದ್ವಿಗ್ನ ಪರಿಸ್ಥಿತಿ ತಲೆದೋರಿದೆ.

ಆಡಳಿತಪಕ್ಷ ಸಿಪಿಎಂ ಮತ್ತು ವಿಶೇಷ ಆರ್ಥಿಕ ವಲಯಕ್ಕೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ತೃಣಮೂಲ ಕಾಂಗ್ರೆಸ್ ಬೆಂಬಲಿಗರ ನಡುವೆ ಸಂಭವಿಸಿರುವ ಘರ್ಷಣೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ.

ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ಅವರು ಗುರುವಾರ ಪ್ರಚಾರ ನಡೆಸಲು ನಂದಿಗ್ರಾಮಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಆಡಳಿತ ವರ್ಗ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿರುವುದಾಗಿ ತಿಳಿಸಿದೆ.

ನಂದಿಗ್ರಾಮದಲ್ಲಿನ ಪರಿಸ್ಥಿತಿಯನ್ನು ಖಂಡಿಸಿರುವ ಕಾಂಗ್ರೆಸ್ ಮುಖಂಡ, ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಿಯರಂಜನ್ ದಾಸ್ ಮುನ್ಶಿ ಚುನಾವಣೆ ದಿನಾಂಕವನ್ನು ಮುಂದೂಡುವಂತೆ ಆಗ್ರಹಿಸಿದ್ದಾರೆ.
ಮತ್ತಷ್ಟು
ಪಕ್ಷದೊಳಗೆ ಆಂತರಿಕ ಪ್ರಜಾಪ್ರಭುತ್ವದ ಕೊರತೆ: ಅರ್ಜುನ್ ಸಿಂಗ್
ಮೇ 20-25ರೊಳಗೆ ಆಗಮಿಸಲಿದ್ದಾನೆ ಮಳೆರಾಯ
ಐಐಎಂ-ಎಯಿಂದ ಶುಲ್ಕ ಏರಿಕೆ ಸಮರ್ಥನೆ
ವಿದ್ಯಾರ್ಥಿಗಳಿಂದ ಇಂಧನ ಮರುಬಳಕೆ ಉಪಕರಣ
ಅಗ್ನಿ-3 ಕ್ಷಿಪಣಿ ಪರೀಕ್ಷಾ ಉಡಾವಣೆ
ಮಹಿಳಾ ಮೀಸಲಾತಿಗೆ ಎಸ್ಪಿ, ಆರ್‌ಜೆಡಿ ವಿರೋಧ