ತಿರುಚಿರಾಪಳ್ಳಿ: ಅಸೌಖ್ಯದ ನಿಮಿತ್ತ ಚಿಕಿತ್ಸೆಗಾಗಿ ಇಲ್ಲಿನ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದ, 35ರ ಹರೆಯದ ಕೈದಿಯೊಬ್ಬ, ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾದ ಘಟನೆ ಸೋಮವಾರ ಮುಂಜಾನೆ ಸಂಭವಿಸಿದೆ.
ಡಿಂಡಿಗಲ್ ನಿವಾಸಿಯಾಗಿರುವ ರಾಜೇಂದ್ರ ಎಂಬಾತ ಕೊಲೆ ಪ್ರಕರಣಕ್ಕೆ ಸಂಬಂಧಿಸದಂತೆ ಸೆರೆಮನೆ ವಾಸ ಅನುಭವಿಸುತ್ತಿದ್ದ. ಈತ ಅಸ್ವಸ್ಥನಾಗಿದ್ದು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಈತನ ಕಾವಲಿಗಿದ್ದ ಪೊಲೀಸ್ ಸಿಬ್ಬಂದಿಯ ಕಣ್ಣು ತಪ್ಪಿಸಿ ಈತ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
|