ನವದೆಹಲಿ: ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹಿಂಪಡೆಯುವ ನಿರ್ಧಾರಕ್ಕೆ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಶುಕ್ರವಾರ ಸಹಿಮಾಡಿದ್ದಾರೆ.
ಶಿಮ್ಲಾ ಭೇಟಿಯಲ್ಲಿರುವ ಪ್ರತಿಭಾ ಅವರು ಘೋಷಣೆಗೆ ಸಹಿ ಮಾಡಿ ಅದನ್ನು ಗೃಹಸಚಿವಾಲಯಕ್ಕೆ ಕಳುಹಿಸಿದ್ದಾರೆ.
ಬಿಜೆಪಿಯ ಬಿ.ಎಸ್.ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಮುಂಚಿತವಾಗಿ ಈ ಘೋಷಣೆ ಹೊರಬಿದ್ದಿದೆ.
ಮೇ 19ಕ್ಕೆ ಕೇಂದ್ರದ ಆಡಳಿತ ಕೊನೆಗೊಂಡಿದ್ದು, ಪ್ರಧಾನಿ ಮನಮೋಹನ್ ಸಿಂಗ್ ಅವರ ಅಧ್ಯಕ್ಷೆತೆಯಲ್ಲಿ ನಡೆದ ಸಂಪುಟ ಸಭೆಯ ಬಳಿಕ ಮತ್ತೆ ಆರು ತಿಂಗಳಿಗೆ ವಿಸ್ತರಿಸಲಾಗಿತ್ತು.
ಇದೀಗ ರಾಜ್ಯದಲ್ಲಿ ಚುನಾವಣೆಗಳು ನಡೆದು ಚುನಾಯಿತ ಸರಕಾರ ಅಸ್ತಿತ್ವಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹಿಂತೆಗೆಯಲಾಗಿದೆ.
|