ಕರ್ನಾಟಕ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಿ.ಎಸ್.ಯಡಿಯೂರಪ್ಪ ಅವರನ್ನು ತಮಿಳ್ನಾಡು ಮುಖ್ಯಮಂತ್ರಿ ಕರುಣಾನಿಧಿ ಅಭಿನಂದಿಸಿದ್ದಾರೆ.
"ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವುದಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ಮುಖ್ಯಮಂತ್ರಿಯಾಗಿ ಹಿತಕರ ಮತ್ತು ಸಂತೋಷದ ಅಧಿಕಾರಾವಧಿಯನ್ನು ಹಾರೈಸುತ್ತೇನೆ" ಎಂದು ಅವರು ಕಳುಹಿಸಿರುವ ಸಂದೇಶದಲ್ಲಿ ಹೇಳಿದ್ದಾರೆ.
ಹೊಗೇನಕಲ್ ವಿಚಾರಕ್ಕೆ ಸಂಬಂಧಿಸಿದಂತೆ ಯೋಜನೆಯನ್ನು ಪ್ರತಿಭಟಿಸಿದ ಕರ್ನಾಟಕದ ಪ್ರಥಮ ರಾಜಕೀಯ ನಾಯಕ ಯಡಿಯೂರಪ್ಪ ಅವರಾಗಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಯಡಿಯೂರಪ್ಪ ಅವರು, ಹೊಗೇನಕಲ್ ವಿಚಾರಕ್ಕೆ ಸಂಬಂಧಿಸಿದಂತೆ ಕೇಳಲಾಗಿರುವ ಪ್ರಶ್ನೆಗೆ ಉತ್ತರಿಸುತ್ತಾ, ಸಂಪುಟ ಸಭೆಯಲ್ಲಿ ಮತ್ತು ಅಡ್ವೋಕೇಟ್ ಜನರಲ್ ಅವರ ಬಳಿ ಈ ವಿಚಾರ ಚರ್ಚಿಸಿದ ಬಳಿಕ ತಮಿಳ್ನಾಡು ಮುಖ್ಯಮಂತ್ರಿ ಕರುಣಾನಿಧಿಯವರ ಬಳಿ ನಿಯೋಗ ತೆರಳುವುದಾಗಿ ಹೇಳಿದ್ದಾರೆ. ಈ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿ ಕಾಪಾಡುವ ಭರವಸೆಯನ್ನು ಅವರು ನೀಡಿದ್ದಾರೆ.
|