ಆಂಧ್ರಪ್ರದೇಶದಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆಯ ಉಪಚುನಾವಣೆಯಲ್ಲಿ ತೆಲಂಗಾಣ ರಾಷ್ಟ್ರೀಯ ಸಮಿತಿ (ಟಿಆರ್‌ಎಸ್) ಹೀನಾಯ ಸೋಲನ್ನು ಅನುಭವಿಸಿರುವುದಕ್ಕೆ ನೈತಿಕ ಹೊಣೆ ಹೊತ್ತು, ಕೆ. ಚಂದ್ರಶೇಖರ್ ಅವರು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ. ಆಂಧ್ರಪ್ರದೇಶದಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಮತ್ತು ಲೋಕಸಭೆ ಉಪ ಚುನಾವಣೆಗಳಲ್ಲಿ ರಾಷ್ಟ್ರೀಯ ತೆಲಂಗಾಣ ಪಕ್ಷ ನಿರೀಕ್ಷಿತ ಸ್ಥಾನ ಪಡೆಯದೇ, ಕೇವಲ ಏಳು ವಿಧಾನಸಭೆ ಮತ್ತು 2 ಲೋಕಸಭೆ ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿತ್ತು. ಜೂನ್ 1ರಂದು ಮತಎಣಿಕೆ ನಡೆದಿದ್ದು, ಈ ಸಂದರ್ಭದಲ್ಲಿಯೇ.ಚಂದ್ರಶೇಖರ್ ಅವರು, ಪಕ್ಷದ ಸೋಲಿನ ಹಿನ್ನೆಲೆಯಲ್ಲಿ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು.
|