ಗೋರಕ್‌ಪುರ್ :ಪೊಲೀಸ್ ಪೇದೆಯನ್ನು ಗುಂಡು ಹಾರಿಸಿ ಹತ್ಯೆ ಮಾಡಿದ ಆರೋಪದ ಮೇಲೆ ಉತ್ತರ ಪ್ರದೇಶದ ಮೀನುಗಾರಿಕೆ ಸಚಿವ ಯಮುನಾ ನಿಶಾದ್ ಅವರ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮುಖ್ಯಮಂತ್ರಿ ಮಾಯಾವತಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯಲ್ಲಿದೆ ಎಂದು ಹೇಳಿಕೆ ನೀಡಿದ ಬೆನ್ನಲ್ಲೆ ಸಂಪುಟದ ಸಚಿವರೊಬ್ಬರು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವುದು ಇರಿಸು ಮುರಿಸು ಉಂಟುಮಾಡಿದೆ.
ಉತ್ತರ ಪ್ರದೇಶದ ಮೀನುಗಾರಿಕೆ ಸಚಿವ ಯಮುನಾ ನಿಶಾದ್ ಹಾಗೂ ಅವರ ಬೆಂಬಲಿಗರು ಹಲ್ಲೆ ನಡೆಸಿದ್ದಲ್ಲದೇ ಗುಂಡುಹಾರಿಸಿ ಹತ್ಯೆಗೈದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
|