ನೋಯ್ಡಾ ಆರುಷಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣದ ಆರೋಪಿ ಅರುಷಿ ತಂದೆ ಡಾ| ರಾಜೇಶ್ ತಲ್ವಾರ್ ಕಂಪೌಂಡರ್ ಆಗಿದ್ದ ಕೃಷ್ಣನನ್ನು ಬುಧವಾರ ಬ್ರೈನ್ ಮ್ಯಾಪಿಂಗ್ ಪರೀಕ್ಷೆಗೆ ಒಳಪಡಿಸಲಾಗಿದೆ.
ಕೃಷ್ಣನನ್ನು ನಗರಕ್ಕೆ ಕರೆದುಕೊಂಡು ಬಂದಿರುವ ಸಿಬಿಐ ಅಧಿಕಾರಿಗಳು ಮಡಿವಾಳದಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಈತನನ್ನು ಪರೀಕ್ಷೆಗೆ ಒಳಪಡಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೆ ಹೊರಬರಬೇಕಿದೆ.
ಅರುಷಿ ಹಾಗೂ ಹೇಮರಾಜ್ ಕೊಲೆ ಪ್ರಕರಣ ದಿನವೂ ಹೊಸ ತಿರುವು ಪಡೆದುಕೊಂಡಿದ್ದು, ಈ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಗೊಂಡಿದೆ. ಕೃಷ್ಣ ಹೇಳಿಕೆಯ ಮೇಲೆ ಸಿಬಿಐ ಅಧಿಕಾರಿಗಳು ರಾಜೇಶ್ ತಲ್ವಾರ್ ನಿವಾಸಕ್ಕೆ ತೆರಳಿದ್ದು ಮರು ಶೋಧ ನಡೆಸಿದ್ದರು. ಈತನ ಹೇಳಿಕೆಯು ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಏತನ್ಮಧ್ಯೆ ಶೀಘ್ರವೇ ಸತ್ಯಾಂಶ ಹೊರಬೀಳಲಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಹೆಚ್ಚಿನ ಮಾಹಿತಿಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಸಿಬಿಐ ಅಧಿಕಾರಿಗಳು ಕೃಷ್ಣನನ್ನು ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಿದ್ದಾರೆ. ಅಂತಿಮವಾಗಿ ನಗರದಲ್ಲಿ ಬ್ರೈನ್ ಮ್ಯಾಪಿಂಗ್ ಮೂಲಕ ಹೆಚ್ಚಿನ ಮಾಹಿತಿ ಪಡೆಯಲು ನಿರ್ಧರಿಸಲಾಗಿತ್ತು.
|