ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಮೇಲ್ಮನೆ ಚುನಾವಣೆ: 'ಕೈ' ಜೋಡಿಸಿದ ಜೆಡಿಎಸ್  Search similar articles
ಮುಂಬರುವ 26ರಂದು ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪರಸ್ಪರ ಬೆಂಬಲಿಸಿಕೊಳ್ಳುವ ಒಪ್ಪಂದಕ್ಕೆ ಬಂದಿವೆ. ನಾಲ್ಕು ರಾಜ್ಯಸಭೆ ಹಾಗೂ ಏಳು ವಿಧಾನ ಪರಿಷತ್ ಸ್ಥಾನಗಳು ತೆರವಾಗುತ್ತಿದ್ದು ಈ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಒಪ್ಪಂದದ ಪ್ರಕಾರ ಕಾಂಗ್ರೆಸ್ ಎರಡು ರಾಜ್ಯಸಭೆ ಮತ್ತು ಒಂದು ವಿಧಾನ ಪರಿಷತ್ ಸ್ಥಾನಗಳಿಗೆ ಸ್ಫರ್ಧಿಸಿದರೆ, ಜೆಡಿಎಸ್ ಎರಡು ವಿಧಾನ ಪರಿಷತ್ ಸ್ಥಾನಗಳಿಗೆ ಸ್ಫರ್ಧಿಸಲಿದೆ. ರಾಜ್ಯಸಭೆಗೆ ಕಾಂಗ್ರೆಸ್‌ನಿಂದ ಮಹಾರಾಷ್ಟ್ರದ ಮಾಜಿ ರಾಜ್ಯಪಾಲ ಎಸ್.ಎಂ.ಕೃಷ್ಣ ಮತ್ತು ಅನಿಲ್ ಲಾಡ್ ಅವರುಗಳು ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ. ಮಾಜಿ ಕೇಂದ್ರ ಸಚಿವ ಎಂ.ವಿ.ರಾಜಶೇಖರನ್ ಅವರು ವಿಧಾನ ಪರಿಷತ್ ಸ್ಥಾನಕ್ಕೆ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.

ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಗಳಾದ ಪ್ರಭಾಕರ್ ಕೋರೆ ಮತ್ತು ರಾಮಾ ಜೋಯಿಸ್ ಅವರುಗಳೂ ತಮ್ಮ ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಬಿಜೆಪಿಯು ವಿಧಾನ ಪರಿಷತ್‌ಗೂ ತನ್ನ ಅಭ್ಯರ್ಥಿಗಳನ್ನು ಹೆಸರಿಸಿದ್ದು ನಾಲ್ವರಲ್ಲಿ ಗೃಹಸಚಿವ ವಿ.ಎಸ್.ಆಚಾರ್ಯ ಅವರೂ ಸೇರಿದ್ದಾರೆ.

ಇದೀಗ ಜೆಡಿಎಸ್ ಮತ್ತು ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಂಡಿರುವ ಕಾರಣ ಎಲ್ಲಾ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಲಿದ್ದಾರೆಂದು ನಿರೀಕ್ಷಿಸಲಾಗಿದೆ ಎಂದು ಮೂಲಗಳು ಹೇಳಿವೆ.
ಮತ್ತಷ್ಟು
ಶಾಲಾಬಸ್ಸಿನಲ್ಲೇ ಪುಟ್ಟ ಬಾಲೆಯ ಮೇಲೆ ಅತ್ಯಾಚಾರ
ಗೂರ್ಖಾಲ್ಯಾಂಡ್‌: ಮುಷ್ಕರ ಮುಂದರಿಕೆ
ತಾಕತ್ತಿದ್ದರೆ ನೇಣಿಗೇರಿಸಿ: ಕಾಂಗ್ರೆಸ್‌ಗೆ ಮೋದಿ ಸವಾಲು
ತ.ನಾ: ಸಿಲಿಂಡರೊಂದಕ್ಕೆ 30 ರೂ ಸಬ್ಸಿಡಿ
ಪದ್ಮಪ್ರಿಯ ನಿಗೂಢ ಸಾವು
ಆರುಷಿ ಹತ್ಯೆ: ನೂಪುರ್‌ಗೆ ಸುಳ್ಳು ಪತ್ತೆ ಪರೀಕ್ಷೆ