ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಅವರ ಅಂಗರಕ್ಷಕರು ಸಿಖ್ ಬಾಲಕನೊಬ್ಬನನ್ನು ಗುಂಡಿಟ್ಟು ಕೊಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಡೇರಾಸಚ್ಚಾ ಸೌಧಕ್ಕೆ ಸಂಬಂಧಿಸಿದ 11 ಮಂದಿಯನ್ನು ಬಂಧಿಸಲಾಗಿದೆ.
ಇದರ ಹೊರತಾಗಿ, ಈ ಪ್ರಕರಣದ ಕುರಿತು ಪ್ರತಿಭಟನೆ ನಡೆಸುವ ವೇಳೆ ಗಲಭೆನಡೆಸಿರುವ 27 ಮಂದಿಯನ್ನು ಭಾನುವಾರ ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ 11 ಮಂದಿಯನ್ನು ಜುಲೈ 2ರ ತನಕ ಪೊಲೀಸರ ವಶಕ್ಕೆ ನೀಡಲಾಗಿದೆ. ಗಲಭೆಗೆ ಸಂಬಂಧಿಸಿದಂತೆ ಬಂಧನಕ್ಕೀಡಾದವರನ್ನು ಜೂನ್ 26ರ ತನಕ ಪೊಲೀಸ್ ವಶಕ್ಕೆ ಒಪ್ಪಿಸಲಾಗಿದೆ.
|