ಉತ್ತರ ಪ್ರದೇಶ ಸರಕಾರವು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ಸಹರಾ ಸಹರ್ ಪ್ರಕರಣದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ನೀಡಿದೆ.
ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿ ಅಲ್ತಮಸ್ ಕಬೀರ್ ನೇತೃತ್ವದ ನ್ಯಾಯಪೀಠವು, ಸಹರಾವು ಯಾವುದೇ ನಿರ್ಮಾಣ ಕೆಲಸವನ್ನು ಕೈಗೆತ್ತಿಕೊಳ್ಳಬಾರದು ಮತ್ತು ಲಕ್ನೋ ಅಭಿವೃದ್ಧಿ ಪ್ರಾಧಿಕಾರವು, ಸಹರಾಕ್ಕೆ ಸೇರಿದ ಯಾವುದೇ ವಾಣಿಜ್ಯ ಆಸ್ತಿಯನ್ನು ಧ್ವಂಸಗೊಳಿಸಬಾರದು ಎಂದು ಹೇಳಿದೆ.
ಅಲಹಾಬಾದ್ ಹೈಕೋರ್ಟ್‌ನ ಲಕ್ನೋಪೀಠವು, ಸಹರಾದ ವಾಣಿಜ್ಯ ಕಟ್ಟಡದ ಧ್ವಂಸಕ್ಕೆ ತಡೆಯಾಜ್ಞೆ ನೀಡಿರುವುದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿತ್ತು.
|