1971ರ ಇಂಡೊ-ಪಾಕ್ ಸಮರದಲ್ಲಿ ಭಾರತವನ್ನು ವಿಜಯದ ಹಾದಿಯಲ್ಲಿ ನಡೆಸಿದ್ದ, ಭಾರತದ ಪ್ರಥಮ ಫೀಲ್ಡ್ ಮಾರ್ಷಲ್ ಸಾಮ್ ಮಣಿಕ್‌ಶಾ ತೀವ್ರ ಅನಾರೋಗ್ಯ ಪೀಡಿತರಾಗಿದ್ದಾರೆ ಎಂದು ಗುರುವಾರ ಮಿಲಿಟರಿ ಆಸ್ಪತ್ರೆಯ ಮೂಲಗಳು ತಿಳಿಸಿವೆ.
94ರ ಹರೆಯದ ಮಾಣಿಕ್‌ಶಾ ತಮಿಳುನಾಡಿನಲ್ಲಿರುವ ವೆಲ್ಲಿಂಗ್ಟನ್‌ನ ಮಿಲಿಟರಿ ಆಸ್ಪತ್ರೆಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಬುಧವಾರ ಸಂಜೆ ಕೋಮಾಗೆ ಜಾರಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆಸ್ಪತ್ರೆಯ ಮೂಲಗಳು ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿವೆ. ಆದರೆ ಈ ಕುರಿತು ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
|