ಸಮಾಜವಾದಿ ಪಕ್ಷದ ನಾಯಕ ಅಮರ್‌ಸಿಂಗ್ ಅವರು ಸೋಮವಾರ ಸಂಜೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಪ್ರಣಬ್ ಮುಖರ್ಜಿ ಅವರನ್ನು ಭೇಟಿ ಮಾಡಿ, ಭಾರತ ಅಮೆರಿಕ ಪರಮಾಣು ಒಪ್ಪಂದದ ಕುರಿತಾಗಿ ಮಾತುಕತೆ ನಡೆಸಿದರು.
ಮುಖರ್ಜಿ ಅವರ ನಿವಾಸದಲ್ಲಿ ನಡೆದ ಈ ಸಭೆಯಲ್ಲಿ ಭಾರತ ಮತ್ತು ಅಮೆರಿಕ ನಡುವಿನ ಅಣು ಒಪ್ಪಂದಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವಿವರಗಳನ್ನು ಮುಖರ್ಜಿ ಅವರು ಅಮರ್‌ಸಿಂಗ್ ಅವರಿಗೆ ತಿಳಿಸುವುದರೊಂದಿಗೆ, ಈ ಒಪ್ಪಂದವನ್ನು ಮುಂದುವರಿಸಲು ಮುಂಬರುವ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು ಎಂದು ತಿಳಿದುಬಂದಿದೆ.
ಎಡಪಕ್ಷಗಳು ತಮ್ಮ ಬೆಂಬಲವನ್ನು ಹಿಂದಕ್ಕೆ ಪಡೆದುಕೊಂಡರೆ ಸರಕಾರ ಉಳಿಸುವಲ್ಲಿ ನಿರ್ಣಾಯಕ ಪಾತ್ರವಹಿಸಲಿರುವ 39 ಸದಸ್ಯರನ್ನೊಳಗೊಂಡ ಸಮಾಜವಾದಿ ಪಕ್ಷವು, ಕಾಂಗ್ರೆಸ್‌ಗೆ ತನ್ನ ಬೆಂಬಲವನ್ನು ಮುಂದುವರಿಸಲಿದೆ ಎಂದು ಸಭೆಯಲ್ಲಿ ಅಮರ್ ಸಿಂಗ್ ಪ್ರಣಬ್ ಅವರಿಗೆ ಭರವಸೆ ನೀಡಿದ್ದಾರೆ.
ಅಣು ಒಪ್ಪಂದಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮನಮೋಹನ್ ಸಿಂಗ್ ಅವರು ಸೋಮವಾರದಂದು ಒಪ್ಪಂದದ ಕುರಿತು ಮುಂದುವರಿಯುವುದು ಖಚಿತ ಎಂಬುದಾಗಿ ಘೋಷಿಸಿರುವ ಹಿನ್ನೆಲೆಯಲ್ಲಿ ಕೇಂದ್ರದ ಯುಪಿಎ ಸರಕಾರ ಬಿಕ್ಕಟ್ಟಿನಲ್ಲಿ ಸಿಲುಕಿದ ಹಿನ್ನೆಲೆಯಲ್ಲಿ ಯುಪಿಎ ಸಮಾಜಾವಾದಿ ಪಕ್ಷದ ಬೆಂಬಲದ ನಿರೀಕ್ಷೆಯಲ್ಲಿದೆ.
|