ವಜ್ರಗಳಿಗೆ ಹೊಳಪನ್ನು ನೀಡುವ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರು ಹಾಗೂ ಪೊಲೀಸ್ ಮತ್ತು ಖಾಸಗಿ ಭದ್ರತಾ ಪಡೆಗಳ ಮಧ್ಯೆ ನಡೆದ ಘರ್ಷಣೆಯಲ್ಲಿ ಒಬ್ಬನು ಮೃತಪಟ್ಟಿದ್ದು ಆರು ಮಂದಿಗೆ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ವಜ್ರಗಳ ಘಟಕಗಳ ಬಳಿ ಸಂಬಳದಲ್ಲಿ ಏರಿಕೆ ಮಾಡುವಂತೆ ಒತ್ತಾಯಿಸಿ ಸುಮಾರು 40 ಸಾವಿರ ಕಾರ್ಮಿಕರು ಪ್ರತಿಭಟನೆ ನಡೆಸಿದಾಗ ಘರ್ಷಣೆ ಸಂಭವಿಸಿ ಒಬ್ಬನ ಸಾವಿಗೆ ಕಾರಣವಾಗಿ ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತರು ಸಂಬಳ ಏರಿಕೆಯ ಬೇಡಿಕೆಯನ್ನು ನಿರ್ಲಕ್ಷಿಸಿದಾಗ ರೊಚ್ಚಿಗೆದ್ದ ಕಾರ್ಮಿಕರು ಖಾಸಗಿ ಭಧ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದಾಗ ಪೊಲೀಸರು ನಡೆಸಿದ ಗೋಲಿಬಾರ್‌ನಲ್ಲಿ ಒಬ್ಬನು ಮೃತಪಟ್ಟಿದ್ದಾನೆ.
|