ಅಫ್ಘಾನಿಸ್ತಾನದ ಕಾಬೂಲ್‌ನಲ್ಲಿ ಭಾರತೀಯ ರಾಯಭಾರ ಕಚೇರಿ ಎದುರುಗಡೆ ನಡೆಸಲಾಗಿರುವ ಆತ್ಮಾಹುತಿ ದಾಳಿಯ ಹಿನ್ನೆಲೆಯಲ್ಲಿ, ವಿದೇಶಾಂಗ ವ್ಯವಹಾರಗಳ ಸಚಿವ ಪ್ರಣಬ್ ಮುಖರ್ಜಿ ಉನ್ನತ ಸಭೆಯೊಂದನ್ನು ಕರೆದಿದ್ದಾರೆ.
ಕಾಬೂಲ್ ಪರಿಸ್ಥಿತಿಯ ಕುರಿತು ಮುಖರ್ಜಿಯವರು ರಕ್ಷಣಾ ಸಚಿವ ಎ.ಕೆ.ಆಂಟನಿ ಹಾಗೂ ವಿದೇಶಾಂಗ ವ್ಯವಹಾರ ಕಚೇರಿಯ ಹಿರಿಯ ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಾಬೂಲ್‌ನಲ್ಲಿ ಎಂಬೆಸಿಯ ಎದುರು ಸ್ಫೋಟ ಸಂಭವಿಸಿ 41 ಜನರು ಹತರಾಗಿದ್ದು ನೂರಾರು ಮಂದಿ ಗಾಯಗೊಂಡಿದ್ದಾರೆ.
|