PTIPTI ರಾಮಸೇತು ವಿವಾದಕ್ಕೆ ಸಂಬಂಧಿಸಿದಂತೆ ಬುಧವಾರದಂದು ಕೇಂದ್ರ ಸರಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಅಫಿದವಿತ್ ಅನ್ನು ಸಲ್ಲಿಸಿದ್ದು, ರಾಮಸೇತುವೆಯ ಅಸ್ತಿತ್ವವೇ ಇಲ್ಲ, ಅಲ್ಲದೇ ರಾಮನೇ ರಾಮಸೇತುವನ್ನು ಧ್ವಂಸಗೊಳಿಸಿರುವುದಾಗಿ ಹೇಳಿಕೆ ನೀಡಿದೆ.ಕೇಂದ್ರ ಸರಕಾರ ಬಹುಕೋಟಿ ವೆಚ್ಚದಲ್ಲಿ ಸೇತುಸಮುದ್ರಂ ಯೋಜನೆ ನಿರ್ಮಾಣಕ್ಕೆ ನಿರ್ಧರಿಸಿದ ಪರಿಣಾಮ, ಈಗಾಗಲೇ ಭಾರತೀಯ ಜನತಾ ಪಕ್ಷ ಸೇರಿದಂತೆ ಹಿಂದೂ ಸಂಘಟನೆಗಳು ತೀವ್ರ ಪ್ರತಿಭಟನೆ ನಡೆಸಿದ್ದವು. ಯೋಜನೆಯಲ್ಲಿ ರಾಮಸೇತುವನ್ನು ಧ್ವಂಸಗೊಳಿಸುವುದರಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಬರುವುದರಿಂದ ಯೋಜನೆಯನ್ನು ಕೈಬಿಡಬೇಕೆಂದು ಆಗ್ರಹಿಸಿದ್ದವು.