ಅಹಮದಾಬಾದಿನಲ್ಲಿ ಬಾಂಬ್ ಸ್ಫೋಟ ನಡೆದ ಎರಡು ದಿನಗಳ ನಂತರ, ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಮತ್ತು ಯುಪಿಎ ಮುಖ್ಯಸ್ಥ ಸೋನಿಯಾಗಾಂಧಿ ಇಂದು ಅಹ್ಮದಾಬಾದಿಗೆ ಭೇಟಿ ನೀಡಲಿದ್ದಾರೆ.
ಬೆಂಗಳೂರು ಮತ್ತು ಅಹಮದಾಬಾದಿನ ಸರಣಿ ಬಾಂಬ್ ಸ್ಫೋಟ ಹಾಗೂ ದೇಶದಲ್ಲಿ ಹೆಚ್ಚುತ್ತಿರುವ ಉಗ್ರಗಾಮಿ ಚಟುವಟಿಕೆಗಳ ಬಗ್ಗೆ ಪ್ರಧಾನಮಂತ್ರಿ ಮತ್ತು ಸೋನಿಯಾಗಾಂಧಿ ಆತಂಕ ವ್ಯಕ್ತಪಡಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.
ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ ಅವರು ಕೂಡಾ ಅಹಮದಾಬಾದಿಗೆ ಭೇಟಿ ನೀಡಲಿದ್ದು, ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ ಮಾಡಲಿದ್ದಾರೆ.
ಬೆಂಗಳೂರಿನಲ್ಲಿ ಸರಣಿ ಬಾಂಬ್ ಸ್ಫೋಟ ನಡೆದ ಬೆನ್ನಲ್ಲೇ ಅಹ್ಮದಾಬಾದಿನಲ್ಲಿ 17 ಸರಣಿ ಬಾಂಬ್ ಸ್ಫೋಟ ನಡೆದಿದ್ದು, ಕನಿಷ್ಟ 49 ಮಂದಿ ಸಾವಿಗೀಡಾಗುವುದರೊಂದಿಗೆ ಸುಮಾರು 160 ಮಂದಿ ಗಾಯಗೊಂಡಿದ್ದರು. ಗಾಯಗೊಂಡವರು ಸಿವಿಲ್ ಆಸ್ಪತ್ರೆ, ಎಲ್.ಜಿ.ಆಸ್ಪತ್ರೆ ಮತ್ತು ವಾಡಿಲಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
|